ಸೋಮವಾರಪೇಟೆ,ನ.೭: ಸಮೀಪದ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಸಂಭ್ರಮದ ಚಾಲನೆ ಕಂಡಿತು. ಗ್ರಾಮಸ್ಥರು ಶಾಲೆಯ ಕಾರ್ಯಕ್ರಮವನ್ನು ತಮ್ಮ ಮನೆಯ ಹಬ್ಬದಂತೆ ಸಡಗರದಿಂದ ಆಚರಿಸಿದರು.
ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಶತಮಾನೋತ್ಸವ ಆಚರಣಾ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ, ಶಾಲಾಭಿವೃದ್ಧಿ ಸಮಿತಿಗಳ ಆಶ್ರಯದಲ್ಲಿ ನಡೆದ ಶತಮಾನೋತ್ಸವ ಕಾರ್ಯಕ್ರಮ, ಮಕ್ಕಳು ಮಹಿಳೆಯರಾದಿಯಾಗಿ ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು.
ಬೆಳಿಗ್ಗೆ ಶಾಲಾ ಆವರಣದಲ್ಲಿ ಗಣಪತಿ ಹೋಮದೊಂದಿಗೆ ಶತಮಾನೋತ್ಸವ ಸಮಾರಂಭಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ನಂತರ ಸುತ್ತಮುತ್ತಲಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಬೇಳೂರು ಬಾಣೆಯಿಂದ ಅಲಂಕೃತ ರಥದಲ್ಲಿ ಅತಿಥಿಗಳನ್ನು ಮೆರವಣಿಗೆ ಮೂಲಕ ಶಾಲಾ ಆವರಣಕ್ಕೆ ಕರೆತಂದರು. ಬೇಳೂರು, ಬಸವನಹಳ್ಳಿ, ಕುಸುಬೂರು, ಕೆಂಚಮ್ಮನಬಾಣೆ, ಕಾರೆಕೊಪ್ಪ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಮಹಿಳೆಯರು ಪೂರ್ಣಕುಂಭದೊAದಿಗೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.
ದಾನಿಗಳಾದ ಕೆ.ಎ. ಭಾಗೀರಥಿ ಜಯಕುಮಾರ್ ಅವರು ಸುಮಾರು ೬೦ ಸಾವಿರ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿಕೊಟ್ಟ ಶಾಲಾ ಪ್ರವೇಶದ್ವಾರದ ಉದ್ಘಾಟನೆ ನೆರವೇರಿತು. ಬೆಂಗಳೂರಿನ ಡಾ. ವೇಣುಗೋಪಾಲ್ ಮತ್ತು ತಂಡದಿAದ ಆಯೋಜನೆಗೊಂಡಿದ್ದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಇನ್ನರ್ ವೀಲ್ ಅಧ್ಯಕ್ಷೆ ತನ್ಮಯಿ ಪ್ರವೀಣ್ ಉದ್ಘಾಟಿಸಿದರು. ನೂರಾರು ಮಂದಿ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದರು.
ಬೇಳೂರು ಗ್ರಾಮ ಪಂಚಾಯಿತಿ ವತಿಯಿಂದ ಶಾಲಾ ಆವರಣದಲ್ಲಿ ರೂ. ೫.೫೦ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ರಂಗಮAದಿರವನ್ನು ಮಾಜಿ ಸಚಿವ ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ನಂತರ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಲಾಯಿತು.
ನೂತನ ರಂಗಮAದಿರದಲ್ಲಿ ಆಯೋಜನೆಗೊಂಡಿದ್ದ ಶತ ಮಾನೋತ್ಸವ ಕಾರ್ಯಕ್ರಮವನ್ನು ಮಾಜೀ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿ ಮಾತನಾಡಿ, ಈ ಹಿಂದೆ ದಾನಿಗಳ ಸಹಕಾರದಿಂದ ಆರಂಭಗೊAಡ ಶಾಲೆಯೊಂದು ಹಂತಹAತವಾಗಿ ಬೆಳೆದು ಇದೀಗ ೧೦೦ ವರ್ಷ ಪೂರೈಸಿರುವುದು ಹೆಮ್ಮೆಯ ವಿಷಯ. ಬೆಳಕು ತನ್ನಿಂದ ಕತ್ತಲೆಯನ್ನು ದೂರ ಮಾಡುತ್ತದೆ. ಕತ್ತಲಿನಿಂದ ಬೆಳಕಿನಡೆಗೆ ಸಾಗಲು ಶಿಕ್ಷಣ ಅತೀ ಅಗತ್ಯ ಎಂದರು.
ಶಿಕ್ಷಣಕ್ಕೆ ಎಲ್ಲರೂ ಆದ್ಯತೆ ನೀಡಬೇಕು. ಸಂಸ್ಕೃತಿ, ಆಚಾರ-ವಿಚಾರಕ್ಕೆ ಒತ್ತು ಕೊಡಬೇಕು ಎಂದ ಅವರು, ಸರ್ಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಈ ನಿಟ್ಟಿನಲ್ಲಿ ಸಂಸದ ಯದುವೀರ್ ಒಡೆಯರ್ ಅವರು ಸಂಸದರ ನಿಧಿಯಿಂದ ಶಾಲಾಭಿವೃದ್ಧಿಗೆ ರೂ.೧೦ ಲಕ್ಷ ಅನುದಾನ ಒದಗಿಸಿದ್ದಾರೆ ಎಂದು ತಿಳಿಸಿದರು.
ನಮ್ಮ ದುಡಿಮೆಯ ಶೇ.೧೦ ರಷ್ಟನ್ನಾದರೂ ಸಮಾಜ ಸೇವೆಗೆ ಮೀಸಲಿಡಬೇಕು. ಈ ನಿಟ್ಟಿನಲ್ಲಿ ಸುಂಟಿಕೊಪ್ಪ ಸಮೀಪದ ೭ನೇ ಹೊಸಕೋಟೆಯಲ್ಲಿ ಉಚಿತ ಸೇವೆಯ ಉದ್ದೇಶದಿಂದ ವೃದ್ಧಾಶ್ರಮ ನಿರ್ಮಿಸಲಾಗುತ್ತಿದೆ. ಇದು ನಿರಾಶ್ರಿತರು-ಬಡವರಿಗೆ ಅನುಕೂಲವಾಗಲಿದೆ ಎಂದರು.
ಮಕ್ಕಳಿಗೆ ವಾಹನ ವ್ಯವಸ್ಥೆ, ಕಂಪ್ಯೂಟರ್ ಹಾಗೂ ಸ್ಪೋಕನ್ ಇಂಗ್ಲೀಷ್ ಶಿಕ್ಷಕಿಯರನ್ನು ನಿಯೋಜಿಸಿ, ಪ್ರತಿ ತಿಂಗಳು ೭೮ ಸಾವಿರ ರೂಪಾಯಿಗಳನ್ನು ಶಾಲೆಯ ಅನುಕೂಲಕ್ಕೆ ಒದಗಿಸುವ ಮೂಲಕ, ಬೇಳೂರು ಸರ್ಕಾರಿ ಶಾಲೆಗೆ ಮರುಜೀವ ನೀಡಿದ, ಸ್ಥಳೀಯರಾದ ಡಾ. ಚಂದ್ರಮೌಳಿ ಅವರು ಮಾತನಾಡಿ, ಉತ್ತಮ ಜೀವನಕ್ಕೆ ಶಿಕ್ಷಣವೇ ಅಡಿಪಾಯವಾಗಿದ್ದು, ವಿದ್ಯಾರ್ಥಿಗಳಿಗೆ ಸಣ್ಣ ವಯಸ್ಸಿನಿಂದಲೇ ಅವಕಾಶ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಅಭಿಪ್ರಾಯಿಸಿದರು.
ಸೇವೆಯಿಂದ ಸಿಗುವ ಸಾರ್ಥಕತೆ ಇನ್ನೆಲ್ಲೂ ಸಿಗುವುದಿಲ್ಲ. ತಾನು ಅಮೇರಿಕಾದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ತಮಗೆ ಬರುತ್ತಿರುವ ಮಾಸಿಕ ಪಿಂಚಣಿ ಹಣದಿಂದ ಶಾಲೆಗೆ ಕೈಲಾದ ಸಹಾಯ ಮಾಡುತ್ತಿದ್ದೇನೆ. ಸರ್ಕಾರಿ ಶಾಲೆಗಳ ಮಕ್ಕಳೂ ಸಹ ಪ್ರತಿಭಾವಂತರಾಗಿದ್ದು, ಅವಕಾಶಗಳನ್ನು ಒದಗಿಸಿಕೊಡಬೇಕಾಗಿದೆ ಎಂದು ಕರೆ ನೀಡಿದರು.
ಶಾಲೆಯ ಹಳೆಯ ವಿದ್ಯಾರ್ಥಿ, ಜಿ.ಪಂ. ಮಾಜೀ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಹಲವಷ್ಟು ಸರ್ಕಾರಿ ಶಾಲೆಗಳು ಮುಚ್ಚುತ್ತಿರುವುದು ದುರಂತ. ೪ಏ
(ಮೊದಲ ಪುಟದಿಂದ) ಇಂತಹ ಸವಾಲುಗಳ ನಡುವೆಯೂ ಬೇಳೂರು ಸರ್ಕಾರಿ ಶಾಲೆ ೧೦೦ ವರ್ಷ ಪೂರೈಸಿದೆ. ಸರ್ಕಾರಿ ಶಾಲೆಗಳ ಉಳಿವಿಗೆ ಗಂಭೀರ ಚಿಂತನೆ ಅಗತ್ಯವಾಗಿದೆ. ಮುಚ್ಚುವ ಹಂತದಲ್ಲಿದ್ದ ಸರ್ಕಾರಿ ಶಾಲೆ ಉಳಿಯಲು ಇವರ ಚಂದ್ರಮೌಳಿ ಅವರ ಕೊಡುಗೆ ಅಪಾರ. ಸೇವೆ ಶ್ಲಾಘನೀಯ ಎಂದರು.
ಸರ್ಕಾರಿ ಶಾಲೆಗಳಿಗೆ ಸರ್ಕಾರ ಹಲವು ಸೌಲಭ್ಯ ಕೊಟ್ಟರೂ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ವಿಷಾದ. ನಮ್ಮ ಶಾಲೆ ನಮ್ಮ ಹೆಮ್ಮೆ ಎಂಬ ಅಭಿಮಾನ ಇರಬೇಕು. ಊರು ಆಶ್ರಯ ಕೊಟ್ಟರೆ; ಶಾಲೆ ಬದುಕು ಕೊಡುತ್ತದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಇಂತಹ ಶಾಲೆಗಳಿಗೆ ದಾಖಲಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿ ಅಧ್ಯಕ್ಷ ಜಿ.ಎಸ್. ಪ್ರಭುದೇವ್ ವಹಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸಾದ್, ಬೇಳೂರು ಗ್ರಾ.ಪಂ. ಅಧ್ಯಕ್ಷೆ ಪಾರ್ವತಿ, ಉಪಾಧ್ಯಕ್ಷ ಕೆ.ಪಿ. ಸುದರ್ಶನ್, ದಾನಿಗಳಾದ ಪಾರ್ವತಿ ಚಂದ್ರಮೌಳಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಮಾರ್ ಉಲ್ಲಾಸ್, ಉಪ ಸಮಿತಿಗಳ ಅಧ್ಯಕ್ಷರುಗಳಾದ ಕೆ.ಜಿ.ಸುರೇಶ್, ಬಿ.ಎನ್. ಬಸವರಾಜು, ಗ್ರಾಮ ಸಮಿತಿ ಅಧ್ಯಕ್ಷ ಗಿರೀಶ್, ಗ್ರಾ.ಪಂ. ಸದಸ್ಯರಾದ ಸುಜಾತಾ, ಯೋಗೇಂದ್ರ, ಗ್ರಾ.ಪಂ. ಪಿಡಿಓ ಮೋಹನ್, ದಾನಿಗಳಾದ ಭಾಗೀರಥಿ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ತನ್ಮಯಿ ಪ್ರವೀಣ್, ದಾನಿ ಕೆ.ಡಿ. ಕುಮಾರ್, ಗುತ್ತಿಗೆದಾರ ಮಂಜುನಾಥ್, ಡಾ. ವೇಣುಗೋಪಾಲ್ ಸೇರಿದಂತೆ ಇತರರು ಇದ್ದರು.
ಶಾಲಾ ಶಿಕ್ಷಕ ವೃಂದ ಪ್ರಾರ್ಥಿಸಿ, ಶಿಕ್ಷಕಿ ನಿರ್ಮಲಾ ಸ್ವಾಗತಿಸಿದರೆ, ಊ.ರಾ. ನಾಗೇಶ್ ಕಾರ್ಯಕ್ರಮ ನಿರ್ವಹಿಸಿದರು. ನಂತರ ಸ್ಥಳೀಯ ಕಲಾವಿದರಾದ ಕೆ.ಎಂ. ರವಿ ಮತ್ತು ತಂಡದಿAದ ರಸಮಂಜರಿ ಕಾರ್ಯಕ್ರಮ ನಡೆಯಿತು. ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ಶತಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶತಮಾನೋತ್ಸವ ಸಮಾರಂಭಕ್ಕೆ ಸಹಕರಿಸಿದ ದಾನಿಗಳನ್ನು ಸನ್ಮಾನಿಸಲಾಯಿತು.