ಸೋಮವಾರಪೇಟೆ, ನ. ೮: ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರ ಹುಟ್ಟುಹಬ್ಬವನ್ನು ಪಕ್ಷದ ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳ ಬಳಗದ ವತಿಯಿಂದ ಸಂಭ್ರಮದಿAದ ಆಚರಿಸಲಾಯಿತು.
ನಗರೂರು ಗ್ರಾಮದಲ್ಲಿರುವ ಶಾಸಕರ ನಿವಾಸಕ್ಕೆ ಬೆಳಗ್ಗಿನಿಂದಲೂ ಕಾರ್ಯಕರ್ತರು, ಹಿತೈಷಿಗಳು, ರಾಜಕೀಯ ಪಕ್ಷಗಳ ಮುಖಂಡರು, ಅಭಿಮಾನಿಗಳು ಆಗಮಿಸಿ ಶುಭ ಕೋರಿದರು. ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಚಿವ ಮಧು ಬಂಗಾರಪ್ಪ ಅವರು ಶಾಸಕರ ನಿವಾಸಕ್ಕೆ ತೆರಳಿ ಶುಭಕೋರಿದರು. ಸಂಜೆ ಬೇಳೂರು ಸರ್ಕಾರಿ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕರನ್ನು ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು, ಸಾರ್ವಜನಿಕರು ಅಭಿನಂದಿಸಿದರು. ಕಾರ್ಯಕ್ರಮದ ಮಧ್ಯದಲ್ಲಿ ಕೇಕ್ ಕತ್ತರಿಸಿ, ಹಾರ ಹಾಕಿ ಶುಭಕೋರಲಾಯಿತು. ನೂರಾರು ಮಂದಿ ಸಭಿಕರು ಸಾಮೂಹಿಕವಾಗಿ ಶುಭ ಹಾರೈಸಿದರು.