ಮಡಿಕೇರಿ, ನ. ೮: ಶಾಲಾ ಮಟ್ಟದ ಕ್ರೀಡಾಕೂಟಗಳು ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ತರ ಪಾತ್ರವಹಿಸುತ್ತವೆ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವೀರಾಜಪೇಟೆ ತಾಲೂಕು ಹಾಗೂ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್, ಮಿಲನ್ಸ್ ಫುಟ್ಬಾಲ್ ಕ್ಲಬ್ ಅಮ್ಮತ್ತಿ ಇವರ ಸಹಯೋಗದೊಂದಿಗೆ ಅಮ್ಮತ್ತಿಯ ಪ್ರೌಢಶಾಲಾ ಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ೧೪ ಮತ್ತು ೧೭ ವರ್ಷ ವಯೋಮಾನದ ಬಾಲಕ, ಬಾಲಕಿಯರ ಫುಟ್ಬಾಲ್ ಪಂದ್ಯಾವಳಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯಿಂದ ಆಟವನ್ನು ಆಡಿ ಯಶಸ್ಸು ಕಾಣುವಂತಾಗಲಿ ಎಂದರು.
ಈ ಸಂದರ್ಭ ಅಮ್ಮತ್ತಿ ಪ್ರೌಢಶಾಲೆ ಅಧ್ಯಕ್ಷ ಕಾವಡಿಚಂಡ ಯು. ಗಣಪತಿ, ಲಯನ್ಸ್ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಕ ಹಾಗೂ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ, ಪಿ.ಎ. ನಾಗೇಶ್, ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಪದಾಧಿಕಾರಿಗಳು, ಅಮ್ಮತ್ತಿ ಲಯನ್ಸ್ ಫುಟ್ಬಾಲ್ ಕ್ಲಬ್ ಪದಾಧಿಕಾರಿಗಳು, ದೈಹಿಕ ಶಿಕ್ಷಕರು ಹಾಜರಿದ್ದರು.
ಬೆಳಗಾವಿ ವಿಭಾಗ ಮುನ್ನಡೆ
ಲೀಗ್ ಮಾದರಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ೧೪ ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ ಬೆಳಗಾವಿ ವಿಭಾಗವು ಎರಡು ಪಂದ್ಯದಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ೬ ಅಂಕಗಳೊAದಿಗೆ ಮೊದಲ ಸ್ಥಾನ ಪಡೆದಿದೆ. ಡಿವೈಇಎಸ್ ಒಂದು ಪಂದ್ಯದಲ್ಲಿ ಗೆಲುವು ಮತ್ತು ಇನ್ನೊಂದು ಪಂದ್ಯದಲ್ಲಿ ಸೋಲು ಕಂಡು ಮೂರು ಅಂಕಗಳೊAದಿಗೆ ದ್ವಿತೀಯ ಸ್ಥಾನ ಪಡೆದಿದೆ. ಮೈಸೂರು ವಿಭಾಗವು ಒಂದು ಗೆಲುವು ಒಂದು ಸೋಲಿನೊಂದಿಗೆ ೩ ಅಂಕಗಳೊAದಿಗೆ ತೃತೀಯ ಸ್ಥಾನದಲ್ಲಿ ಇದೆ. ಬೆಂಗಳೂರು ಹಾಗೂ ಕಲಬುರ್ಗಿ ವಿಭಾಗ ತಲಾ ಒಂದು ಸೋಲು ಕಂಡು ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನವನ್ನು ಪಡೆದುಕೊಂಡಿದೆ.
೧೪ ವರ್ಷ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಬೆಳಗಾವಿ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ ೩ ಅಂಕಗಳೊAದಿಗೆ ಮೊದಲ ಸ್ಥಾನದಲ್ಲಿದ್ದು, ಬೆಂಗಳೂರು ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಮೈಸೂರು ಹಾಗೂ ಕಲಬುರ್ಗಿ ತಲಾ ಒಂದು ಪಂದ್ಯದಲ್ಲಿ ಸೋಲು ಕಂಡು ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.
೧೭ ವರ್ಷ ವಯೋಮಾನದ ಬಾಲಕರ ಪಂದ್ಯದಲ್ಲಿ ಬೆಳಗಾವಿ ವಿಭಾಗವು ೨ ಪಂದ್ಯದಲ್ಲಿ ಗೆಲುವು ಸಾಧಿಸಿ ಆರು ಅಂಕಗಳೊAದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಡಿವೈಇಎಸ್ ತಂಡವು ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಬೆಂಗಳೂರು ಒಂದು ಗೆಲುವು ಹಾಗೂ ಒಂದು ಪಂದ್ಯ ಸೋಲು ಕಂಡು ತೃತೀಯ ಸ್ಥಾನದಲ್ಲಿದೆ. ಕಲಬುರ್ಗಿ ವಿಭಾಗ ಒಂದು ಪಂದ್ಯದಲ್ಲಿ ಸೋಲು ಕಂಡು ನಾಲ್ಕು ಹಾಗೂ ಮೈಸೂರು ವಿಭಾಗ ಎರಡು ಪಂದ್ಯದಲ್ಲಿ ಸೋಲು ಕಂಡು ಐದನೇ ಸ್ಥಾನದಲ್ಲಿದೆ.
೧೭ ವರ್ಷ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕಲಬುರ್ಗಿ ವಿಭಾಗ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ ಪ್ರಥಮ ಸ್ಥಾನವನ್ನು ಕಾಯ್ದುಕೊಂಡಿದೆ. ಬೆಳಗಾವಿ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ ದ್ವಿತೀಯ ಸ್ಥಾನ ಮತ್ತು ಮೈಸೂರು ವಿಭಾಗವು ಒಂದು ಪಂದ್ಯದಲ್ಲಿ ಸಮಬಲ ಸಾಧಿಸಿ ತೃತೀಯ ಸ್ಥಾನವನ್ನು ಕಾಯ್ದುಕೊಂಡಿದೆ. ಬೆಂಗಳೂರು ವಿಭಾಗವು ಒಂದು ಪಂದ್ಯದಲ್ಲಿ ಸೋಲು ಕಂಡು ನಾಲ್ಕನೇ ಸ್ಥಾನ ಪಡೆದುಕೊಂಡಿದೆ.
-ಕೆ.ಎA ಇಸ್ಮಾಯಿಲ್ ಕಂಡಕರೆ