ಸೋಮವಾರಪೇಟೆ, ನ. ೧೨: ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕಂದೂರು ಗ್ರಾಮದ ಜನವಸತಿ ಪ್ರದೇಶದ ಮನೆಗಳ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿಗಳ ಬದಲಾವಣೆ ಹಾಗೂ ಕಂಬಗಳ ಸ್ಥಳಾಂತರ ವಿಚಾರವಾಗಿ ಗ್ರಾಮಸ್ಥರು ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ಮೂಲಕ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ, ಗ್ರಾಮಸ್ಥರ ಬೇಡಿಕೆ ಈಡೇರಿಸಿದ ಸೆಸ್ಕ್ನ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕೇಶ್ ಅವರನ್ನು ಸನ್ಮಾನಿಸಲಾಯಿತು.

ಕಲ್ಕಂದೂರು ಗ್ರಾಮದಲ್ಲಿ ಈ ಹಿಂದೆ ಅವೈಜ್ಞಾನಿಕವಾಗಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಗಳನ್ನು ಮಾರ್ಪಡಿಸುವಂತೆ ಹಲವಾರು ಬಾರಿ ಗ್ರಾಮ ಸಭೆಗಳಲ್ಲಿ ಒತ್ತಾಯಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಎಇಇ ಅವರಿಗೆ ಮನವಿ ಸಲ್ಲಿಸಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾಗಿ ಸಮಸ್ಯೆ ಬಗೆಹರಿಸಿದ್ದಾರೆ ಎಂದು ಕರವೇ ಪ್ರಮುಖರಾದ ಕೆ.ಪಿ. ರವೀಶ್ ಶ್ಲಾಘಿಸಿದರು.

ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದ ಹಿನ್ನೆಲೆ ಕರವೇ ಪದಾಧಿಕಾರಿಗಳು ಸೆಸ್ಕ್ ಇಲಾಖಾ ಕಚೇರಿಗೆ ತೆರಳಿ ಅಭಿಯಂತರ ಲೋಕೇಶ್ ಅವರನ್ನು ಅಭಿನಂದಿಸಿದರು. ಈ ಸಂದರ್ಭ ಪ್ರವೀಣ್ ಶೆಟ್ಟಿ ಬಣದ ಕರವೇ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ವಸಂತ್, ಉಪಾಧ್ಯಕ್ಷ ಚಂದ್ರು, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಇಬ್ರಾಹಿಂ, ವೆಂಕಟೇಶ್, ಜಗನ್ನಾಥ್ ಕಾಗಡಿಕಟ್ಟೆ, ನಿತಿನ್ ಮಿಟ್ಟು, ಸಚಿನ್ ಕಲ್ಕಂದೂರ್, ಉದಯ, ಯಡೂರು ಆನಂದ್, ನಾಗೇಂದ್ರ ಸೇರಿದಂತೆ ಇತರರು