ಮಡಿಕೇರಿ, ನ. ೧೧: ರಾಷ್ಟçದ ರಾಜಧಾನಿ ನವದೆಹಲಿಯಲ್ಲಿ ನಿನ್ನೆ ಬಾಂಬ್ ಸ್ಫೋಟ ಘಟನೆ ನಡೆದಿರುವ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲೂ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಮಂಗಳವಾರದAದು ಜಿಲ್ಲಾ ಕೇಂದ್ರ ಮಡಿಕೇರಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣ, ರಾಜಾಸೀಟ್ ಸೇರಿದಂತೆ ವಿವಿಧೆಡೆ ಬಾಂಬ್ ನಿಷ್ಕಿçಯ ದಳ ಶ್ವಾನ ದಳ ಸೇರಿದಂತೆ ಭದ್ರತಾ ಪಡೆಯಿಂದ ತಪಾಸಣೆ ನಡೆಸಲಾಯಿತು. ಇದಲ್ಲದೆ ಜಿಲ್ಲೆಯ ಇನ್ನಿತರ ಪ್ರವಾಸಿ ತಾಣಗಳಲ್ಲೂ ಪೊಲೀಸ್ ಇಲಾಖೆ ನಿಗಾವಹಿಸಿದೆ ಎಂದು ಎಸ್ಪಿ ಕೆ. ರಾಮರಾಜನ್ ತಿಳಿಸಿದ್ದಾರೆ. ಜನಸಂದಣಿಯಾಗುವ ಪ್ರದೇಶ, ಪ್ರವಾಸಿ ತಾಣಗಳು ಮಾತ್ರವಲ್ಲದೆ ಜಿಲ್ಲೆಯಲ್ಲಿ ಮದ್ದು-ಗುಂಡು ವ್ಯಾಪಾರ ಕೇಂದ್ರಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಎಲ್ಲೆಲ್ಲಿಗೆ ಮದ್ದು-ಗುಂಡು, ಸ್ಫೋಟಕದಂತಹ ವಸ್ತುಗಳನ್ನು ಪೂರೈಸಲಾಗಿದೆ ಎಂಬ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಮುಂದಿನ ದಿನಗಳಲ್ಲೂ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.