ಸೋಮವಾರಪೇಟೆ, ನ. ೧೨: ಇಲ್ಲಿನ ಪಟ್ಟಣ ಪಂಚಾಯಿತಿಯ ಆಡಳಿತಾಧಿಕಾರಿಯಾಗಿ ತಾಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಿಯೂ ಆಗಿರುವ ಕೆ.ಕೆ. ಕೃಷ್ಣಮೂರ್ತಿ ಅವರು ಅಧಿಕಾರ ಸ್ವೀಕರಿಸಿದರು.

ಪ.ಪಂ. ಚುನಾಯಿತ ಜನಪ್ರತಿನಿಧಿಗಳ ಅಧಿಕಾರ ಅವಧಿ ಮುಕ್ತಾಯವಾಗಿದ್ದು, ಆಡಳಿತಾಧಿಕಾರಿಗಳನ್ನು ನೇಮಿಸಿ ಕಳೆದ ತಾ. ೬ರಂದು ಸರ್ಕಾರ ಆದೇಶ ಹೊರಡಿಸಿತ್ತು. ಸೋಮವಾರಪೇಟೆ ಪ.ಪಂ.ಗೆ ತಹಶೀಲ್ದಾರರನ್ನು ನಿಯೋಜಿಸಲಾಗಿತ್ತು.

ಅದರಂತೆ ತಹಶೀಲ್ದಾರ್ ಕೃಷ್ಣಮೂರ್ತಿ ಅವರು ಇಂದು ಬೆಳಿಗ್ಗೆ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದರು. ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಆರೋಗ್ಯ ನಿರೀಕ್ಷಕ ಜಾಸಿಂ ಖಾನ್, ಅಧಿಕಾರಿ ರೂಪಾ, ಸಿಬ್ಬಂದಿಗಳಾದ ಭಾವನಾ, ನೈನಾ, ಆದಿಲ್ ಅವರುಗಳು ಇದ್ದರು.