ಶನಿವಾರಸಂತೆ, ನ. ೧೧: ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಹಲಸಿನ ಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ., ಬಿ.ಕಾಂ., ಬಿ.ಸಿ.ಎ. ವಿಭಾಗಗಳ ಸಹಭಾಗಿತ್ವದಲ್ಲಿ ಪದವಿ ಪೂರ್ವ ಅಂತರ ಕಾಲೇಜು ಸಾಂಸ್ಕೃತಿಕ ಮತ್ತು ಪಠ್ಯೇತರ ಚಟುವಟಿಕೆಗಳ ಸಂಯುಕ್ತ ೨೦೨೫ ಫೆಸ್ಟ್ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ೭ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಸೋಮವಾರಪೇಟೆ ತಾಲೂಕು, ಸಕಲೇಶಪುರ ತಾಲೂಕು, ಅರಕಲಗೂಡು ತಾಲೂಕಿನ ೯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಗಳಲ್ಲಿ ಸೋಮವಾರಪೇಟೆ ಕುವೆಂಪು ವಿದ್ಯಾಸಂಸ್ಥೆ ಬಿಟಿಸಿಜಿ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನದೊಂದಿಗೆ ಟ್ರೋಫಿಯನ್ನು ಪಡೆದುಕೊಂಡಿತು.ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನದೊಂದಿಗೆ ಟ್ರೋಫಿಯನ್ನು ಗಳಿಸಿತು.
ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಶಂಭುಲಿAಗಪ್ಪ ವಹಿಸಿ ವಿಜೇತ ಕಾಲೇಜು ತಂಡಗಳಿಗೆ ಬಹುಮಾನ ವಿತರಿಸಿದರು.ಮುಖ್ಯ ಅತಿಥಿಗಳಾಗಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಪರಮೇಶ್, ಖಜಾಂಚಿ ಡಾ.ಉದಯಕುಮಾರ್, ಪದವಿ ಕಾಲೇಜು ಪ್ರಾಂಶುಪಾಲ ಎಂ.ಆರ್.ನಿರAಜನ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪವಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಅಬ್ದುಲ್ ರಬ್ ಪಾಲ್ಗೊಂಡಿದ್ದರು. ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.