ವೀರಾಜಪೇಟೆ, ನ. ೧೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವೀರಾಜಪೇಟೆ ವತಿಯಿಂದ ಕಳತ್ಮಾಡು ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸ್ವಾಸ್ತö್ಯ ಸಂಕಲ್ಪ ಕಾರ್ಯಕ್ರಮ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಮಾಲೋಚಕಿ ರಮ್ಯ ಅವರು, ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಹದಿಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದ ಕಾಯಿಲೆಗೆ ಒಳಗಾಗುತ್ತಿದ್ದಾರೆ. ಹಾಗೂ ತಮ್ಮ ಓದಿನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದ್ದಾರೆ. ಯಾರಾದರೂ ವ್ಯಸನಕ್ಕೆ ಒಳಗಾದಲ್ಲಿ ಅಥವಾ ಈ ರೀತಿಯ ಅಮಲು ಪದಾರ್ಥಗಳ ಸೇವನೆ ಮಾಡುವುದು ಕಂಡು ಬಂದಲ್ಲಿ ಸಂಬAಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆಯ ಶಿಕ್ಷಕರಾದ ಕೃಷ್ಣ ಚೈತನ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ನವೀನ್, ಸೇವಾ ಪ್ರತಿನಿಧಿ ಜಯಪ್ರಕಾಶ್, ಪದ್ಮ, ವಿದ್ಯಾರ್ಥಿಗಳು, ಶಿಕ್ಷಕರು, ಭಾಗವಹಿಸಿದ್ದರು.