ಕಡಂಗ, ನ. ೧೨ : ಅರಪಟ್ಟು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಅಂಗನವಾಡಿ ಕಟ್ಟಡಕ್ಕೆ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ಶಿಲಾನ್ಯಾಸ ನೆರವೇರಿಸಿದರು. ಕಡಂಗ ಪ್ರಾಥಮಿಕ ಶಾಲೆಯ ಬಳಿ ಅಂಗನವಾಡಿ ಕಟ್ಟಡಕ್ಕೆ ರೂ. ೨೦ ಲಕ್ಷದಲ್ಲಿ ನಿರ್ಮಾಣವಾಗಲಿದ್ದು, ಭೂಮಿಪೂಜೆ ಬಳಿಕ ಮಾತನಾಡಿದ ಶಾಸಕರು, ಪ್ರತಿ ವಿದ್ಯಾರ್ಥಿ ತಮ್ಮ ವಿದ್ಯಾಭ್ಯಾಸದ ಆರಂಭವನ್ನು ಅಂಗನವಾಡಿಯಲ್ಲಿ ಪ್ರಾರಂಭಿಸುತ್ತಾರೆ. ಹಾಗಾಗಿ ಅಂಗನವಾಡಿ ಕೇಂದ್ರಗಳು ದೇಶದ ಭವಿಷ್ಯ ನಿರ್ಮಾಣದಲ್ಲಿ ಮಹತ್ವದ ಪಾತ್ರವನ್ನು ಒದಗಿಸುತ್ತದೆ ಹಾಗೂ ರಾಜ್ಯ ಸರ್ಕಾರ ಈಗಾಗಲೇ ಅಂಗನವಾಡಿಯಲ್ಲಿ ಕಲಿಯುವ ಮಕ್ಕಳಿಗೆ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಸುಸಜ್ಜಿತ ಕಟ್ಟಡ ಹಾಗೂ ಪುಟಾಣಿ ಮಕ್ಕಳ ಕಲಿಕೆಗೆ ಬೇಕಾದಂತಹ ಎಲ್ಲಾ ವ್ಯವಸ್ಥೆಗಳು ಈ ಅಂಗನವಾಡಿ ಕೇಂದ್ರಗಳಲ್ಲಿ ಇರಲು ಸರ್ಕಾರ ವ್ಯವಸ್ಥೆ ಕಲ್ಪಿಸಿದೆ, ಕಾಮಗಾರಿ ಶೀಘ್ರದಲ್ಲಿ ಮುಕ್ತಾಯಗೊಂಡು ಮಕ್ಕಳ ಓದಿಗೆ ಸಹಕಾರಿಯಾಗಲಿದೆ ಎಂದು ಶಾಸಕರು ಹೇಳಿದರು.

ಈ ಸಂದರ್ಭ ಕೆಡಿಪಿ ಸದಸ್ಯ ಮಾಳೇಟಿರ ಪ್ರಶಾಂತ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಿಕ್ ಕಾವೇರಮ್ಮ, ಉಪಾಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಕೋಡಿರ ವಿನೋದ್ ನಾಣಯ್ಯ, ಶೈಲಾ ಕುಟ್ಟಪ್ಪ, ವಾಣಿ, ಪ್ರಕಾಶ್, ಸುಬೀರ್, ಮಹಮ್ಮದ್, ರಜಾಕ್, ಜಕ್ರಿಯ, ಸಿದ್ದಿಕ್ ಹಾಗೂ ಪಕ್ಷದ ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.