ಸೋಮವಾರಪೇಟೆ, ನ.೧೨ : ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳು, ರಾಜ್ಯ ಸರ್ಕಾರದ ಶಿಕ್ಷಣ ಇಲಾಖಾ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಶಾಸಕ ಡಾ. ಮಂತರಗೌಡ ಅವರ ಗೃಹ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳು, ಪ್ರಮುಖವಾಗಿರುವ ಬೇಡಿಕೆಗಳ ಬಗ್ಗೆ ಸಚಿವರ ಗಮನ ಸೆಳೆದರು.
ಕೊಡಗು ಜಿಲ್ಲೆಯಲ್ಲಿ ಕನಿಷ್ಟ ೨೫ ವಿದ್ಯಾರ್ಥಿಗಳ ಸಂಖ್ಯೆ ಮಿತಿಯ ನಿಯಮದಿಂದ ಅನುದಾನಿತ ಶಾಲೆಗಳು ಮುಚ್ಚುತ್ತಿವೆ. ಆದ್ದರಿಂದ ಇದಕ್ಕೆ ಸಂಬAಧಿಸಿದAತೆ ಸಂಖ್ಯೆಯ ಮಿತಿಯ ನಿಯಮವನ್ನು ರದ್ದುಪಡಿಸಬೇಕು ಎಂದು ಶಿಕ್ಷಕರು ಮನವಿ ಮಾಡಿದರು.
ಮುಚ್ಚಿದ ಶಾಲೆಗಳ ಶಿಕ್ಷಕರಿಗೆ ಸೇವಾ ಭದ್ರತೆಯನ್ನು ಕಲ್ಪಿಸುವುದಾಗಿ ಸಚಿವರು ಭರವಸೆ ನೀಡಿದರು. ಪ್ರೌಢಶಾಲಾ ಸಹ ಶಿಕ್ಷಕ ಹುದ್ದೆಯಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ ಮುಂಬಡ್ತಿಯನ್ನು ಶೀಘ್ರವಾಗಿ ಆರಂಭ ಮಾಡಬೇಕು. ಪ್ರೌಢಶಾಲಾ ಸಹ ಶಿಕ್ಷಕ ಹುದ್ದೆಯಿಂದ ಮುಖ್ಯ ಶಿಕ್ಷಕ ಹುದ್ದೆಗೆ ಮುಂಬಡ್ತಿ ನೀಡಬೇಕು. ಅನುದಾನಿತ ಶಾಲಾ ಶಿಕ್ಷಕರಿಗೂ ಆರೋಗ್ಯ ಸಂಜೀವಿನಿ ನೀಡಬೇಕು ಎಂದು ಪದಾಧಿಕಾರಿಗಳು ಮನವಿ ಮಾಡಿದರು. ಕೆಲವೇ ದಿನಗಳಲ್ಲಿ ಈ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ನೀಡುತ್ತೇವೆ ಎಂದು ಸಚಿವರು ಭರವಸೆ ನೀಡಿದರು.
ಸಿ.ಬಿ.ಎಸ್.ಸಿ ಮತ್ತು ಐ.ಸಿ.ಎಸ್.ಸಿ. ಮಾದರಿಯಲ್ಲಿ ಉತ್ತೀರ್ಣತೆಯ ಮಾನದಂಡವನ್ನು ಆಂತರಿಕ ಅಂಕಗಳು ಸೇರಿದಂತೆ ಶೇ ೩೩ ಅಂಕಗಳಿಗೆ ನಿಗದಿ ಮಾಡಿರುವುದು ಶ್ಲಾಘನೀಯ. ಇದನ್ನು ಯಾವುದೇ ಕಾರಣಕ್ಕೂ ರದ್ದುಪಡಿಸಬಾರದು ಎಂದು ಮನವಿ ಮಾಡಿದ ಪದಾಧಿಕಾರಿಗಳು, ಈ ಆದೇಶ ಹೊರಡಿಸಿದ ಸಚಿವ ಮಧು ಬಂಗಾರಪ್ಪ ಅವರನ್ನು ಸಂಘದ ವತಿಯಿಂದ ಅಭಿನಂದಿಸಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಎಚ್.ಜಿ.ಕುಮಾರ್, ಸೋಮವಾರಪೇಟೆ ತಾಲೂಕು ಘಟಕದ ರಾಜ್ಯ ಪರಿಷತ್ ಸದಸ್ಯ ಕೆ.ಪಿ.ಜಯಕುಮಾರ್, ಉಪಾಧ್ಯಕ್ಷ ಯಶವಂತ್, ಜಿಲ್ಲಾ ನಿರ್ದೇಶಕ ಸತ್ಯ ನಾರಾಯಣ ಇದ್ದರು.