ಕುಶಾಲನಗರ, ನ. ೧೧: ಕೊಡಗು ಜಿಲ್ಲೆಯಲ್ಲಿ ಸಿ ಮತ್ತು ಡಿ ಭೂಮಿಗೆ ಸಂಬAಧಿಸಿದAತೆ ಉಂಟಾಗಿರುವ ಸಮಸ್ಯೆಯಲ್ಲಿ ರೈತರಿಗೆ ಅನ್ಯಾಯವಾಗದಂತೆ ಕ್ರಮ ವಹಿಸಲಾಗುವುದೆಂದು ರಾಜ್ಯ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಭರವಸೆ ನೀಡಿದ್ದಾರೆ.

ಕುಶಾಲನಗರದ ಮಾದಾಪಟ್ಟಣ ಗ್ರಾಮದ ಬಳಿ ನೂತನ ತಾಲೂಕು ಕಚೇರಿಯ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು; ೧೯೬೪ರ ನಂತರದಿAದ ಬಗೆಹರಿಯದ ಸಿ ಮತ್ತು ಡಿ ಭೂಮಿ ಸಮಸ್ಯೆ ಬಗ್ಗೆ ಸರಕಾರ ಸುಪ್ರೀಂ ಕೋರ್ಟ್ ಮೂಲಕ ಕಾನೂನಾತ್ಮಕ ಹೋರಾಟ ನಡೆಸಿ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ವಹಿಸಲಾಗುವುದು. ೨೦೨೧ ರಲ್ಲಿ ಅರಣ್ಯ ಇಲಾಖೆ ೧೨,೦೦೦ ಹೆಕ್ಟೇರ್ ಪ್ರದೇಶವನ್ನು ರೈತರಿಂದ ತೆರವುಗೊಳಿಸಿ ವಶಕ್ಕೆ ಪಡೆಯುವ ಬಗ್ಗೆ ಈಗಾಗಲೇ ರಾಜ್ಯ ಉಚ್ಚ ನ್ಯಾಯಾಲಯದಿಂದ ಆದೇಶ ಪ್ರಕಟಗೊಂಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಆದೇಶದ ವಿರುದ್ಧ ರೈತರ ಪರವಾಗಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ ಎಂದು ವಿವರಿಸಿದರು.

ಕೊಡಗು ಜಿಲ್ಲೆಯ ಇಬ್ಬರು ಶಾಸಕರುಗಳ ಜೊತೆಗೆ ಚರ್ಚಿಸಲಾಗಿ ತಜ್ಞರ ಸಮಿತಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಗಮನಹರಿಸಿದ್ದು ಪ್ರಸಕ್ತ ಇರುವ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಈ ಬಗ್ಗೆ ಕಾನೂತಾತ್ಮಕ ಹೋರಾಟ ನಡೆಸುತ್ತಿರುವುದರಿಂದ ರೈತರ ಜಮೀನುಗಳನ್ನು ವಶಪಡಿಸದಿರಲು ಇಲಾಖೆಗಳಿಗೆ ಎರಡು ತಿಂಗಳ ಹೆಚ್ಚುವರಿ ಅವಧಿ ನೀಡಿ ಪರೋಕ್ಷ ಸೂಚನೆ ನೀಡಲಾಗಿದೆ. ಪಕ್ಕಾ ದಾಖಲೆ ಆಗದೆ ಇರುವ ಪೋಡಿ ಸಮಸ್ಯೆ ಬಗ್ಗೆ ಸರ್ಕಾರ ಸ್ಥಳೀಯ ಆಡಳಿತದ ಮೂಲಕ ಮನೆ ಬಾಗಿಲಿಗೆ ತೆರಳಿ ಸಮಸ್ಯೆಯನ್ನು ಪರಿಹರಿಸುವ ಚಿಂತನೆ ಹರಿಸಿದೆ ಎಂದರು.

೨೦೨೫ ರಲ್ಲಿ ಸರ್ಕಾರ ೨೩೪೪ ಪೋಡಿ ದುರಸ್ತಿ ಪ್ರಕರಣಗಳನ್ನು ಬಗೆಹರಿಸಿದೆ ಎಂದು ಮಾಹಿತಿ ನೀಡಿದ ಸಚಿವರು ಆದಷ್ಟು ಶೀಘ್ರದಲ್ಲಿ ಉಳಿದ ಕಡತಗಳನ್ನು ಸರಿಪಡಿಸುವ ಭರವಸೆ ವ್ಯಕ್ತಪಡಿಸಿದರು.

ಕಂದಾಯ ಇಲಾಖೆ ಮೂಲಕ ವಿವಿಧ ದಾಖಲೆಗಳ ಸರಳೀಕರಣ ವ್ಯವಸ್ಥೆ ಮಾಡಲಾಗಿದೆ. ಪೌತಿ ಖಾತೆಗಳನ್ನು ಈ -ಪೌತಿ ಆಂದೋಲನ ಮೂಲಕ ಕಂದಾಯ ಇಲಾಖೆ ಸಮಸ್ಯೆಗೆ ಪರಿಹಾರ ಹುಡುಕುತ್ತಿದೆ ಎಂದು ಸಚಿವರು ಹೇಳಿದರು.

ಅತಂತ್ರ ದಾಖಲೆಗಳನ್ನೂ ಇತರ ಮೂಲಗಳಿಂದ ಸಂಗ್ರಹಿಸಲು ಸರ್ಕಾರ ಈಗಾಗಲೇ ಕ್ರಮವಹಿಸಿದ್ದು, ದಾಖಲೆಗಳ ರಕ್ಷಣೆ ಮಾಡುವ ಮೂಲಕ ಪ್ರಸಕ್ತ ೫೦ ಕೋಟಿ ಪುಟಗಳ ದಾಖಲೆ ಸ್ಕಾö್ಯನ್ ಮಾಡಲಾಗಿದೆ. ಇನ್ನುಳಿದಂತೆ ಉಳಿದ ದಾಖಲೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣ ಗೊಳಿಸಲಾಗುವುದು ಎಂದರು. ಭೂ ಸುರಕ್ಷಾ ಯೋಜನೆ ಅಡಿಯಲ್ಲಿ ಕಡತಗಳ ರಕ್ಷಣೆ ಮಾಡುವ ಕೆಲಸ ನಡೆಯಲಿದೆ. ಮುಂದಿನ ದಿನಗಳಲ್ಲಿ ಕಡತಗಳನ್ನು ತಕ್ಷಣ ವಿಲೇವಾರಿ ಮಾಡುವ ಯೋಜನೆ ಸರ್ಕಾರ ಹಮ್ಮಿಕೊಂಡಿದೆ ಎಂದರು.

ಹಿಂದಿನ ವೈಫಲ್ಯಗಳ ಇತ್ಯರ್ಥ

ಹಿಂದಿನ ಸರಕಾರದ ವೈಫಲ್ಯಗಳನ್ನು ಇತ್ಯರ್ಥ ಮಾಡುವ ಕೆಲಸ ಸಾಗುತ್ತಿದೆ ಎಂದ ಕೃಷ್ಣಭೈರೇಗೌಡ ಪ್ರಸಕ್ತ ಸುಧಾರಣೆ ಕಾಣುತ್ತಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲೆಯಲ್ಲಿ ಭೂ ಸುರಕ್ಷತಾ ಯೋಜನೆ ಅಡಿಯಲ್ಲಿ ನಾಲ್ಕು ತಾಲೂಕುಗಳಲ್ಲಿ ಎಲ್ಲಾ ರೀತಿಯ ಕೆಲಸಗಳು ಪೂರ್ಣಗೊಂಡಿವೆ. ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ಒಂದು ತಿಂಗಳ ಕಾಲಾವಕಾಶ ಅಗತ್ಯವಿದೆ ಎಂದರು.

ಸಿ ಮತ್ತು ಡಿ ಭೂಮಿಯ ಸಮಸ್ಯೆಗೆ ಕಾನೂನು ಚೌಕಟ್ಟಿನಲ್ಲಿ ಪರಿಹಾರ ಹುಡುಕಲಾಗುತ್ತಿದೆ. ಸುಮಾರು ಒಂದು ಲಕ್ಷ ಪೋಡಿ ದುರಸ್ತಿ ಪ್ರಕರಣಗಳು ಬಾಕಿ ಇದ್ದು ಅವುಗಳ ಗೊಂದಲಕ್ಕೆ ಕಾನೂನಾತ್ಮಕ ಪರಿಹಾರ ಹುಡುಕಲಾಗುತ್ತದೆ ಎಂದರು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಿದ್ದಾರೆ ಎಂದು ಹೇಳಿದರು.

ಜನರಿಗೆ ಬೆರಳ ತುದಿಯಲ್ಲಿ ಕಂದಾಯ ಇಲಾಖೆಯ ಎಲ್ಲಾ ಸೌಲಭ್ಯಗಳು ದೊರಕುವಂತೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಕಾರ್ಯ ಯೋಜನೆ ರೂಪಿಸುತ್ತಿದೆ ಎಂದ ಅವರು, ಕ್ಷೇತ್ರ ಶಾಸಕ ಮಂತರ್ ಗೌಡ ಅವರ ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸರಕಾರ ಮತ್ತು ಪ್ರಜೆಗಳ ಕೊಂಡಿಯಾಗಿ ಆಡಳಿತ ಕಚೇರಿಗಳು ಕಾರ್ಯನಿರ್ವಹಿಸಲಿವೆ. ಆ ಮೂಲಕ ಪ್ರಜೆಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುವುದರೊಂದಿಗೆ ಸ್ಥಳೀಯ ಆಡಳಿತ ಜನ ಪರವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಸಚಿವ ಕೃಷ್ಣಭೈರೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಕಳೆದ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರ ರಾಜ್ಯದ ೪೯ ನೂತನ ತಾಲೂಕುಗಳಿಗೆ ಪ್ರಜಾಸೌಧ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿದೆ.

ಪ್ರತಿ ತಾಲೂಕುಗಳಲ್ಲಿ ೮.೬೦ ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ. ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಒಂದೇ ಕಟ್ಟಡದಲ್ಲಿ ಅಗತ್ಯವಿರುವ ಎಲ್ಲಾ ಸಾರ್ವಜನಿಕ ಕಚೇರಿಗಳಿಗೂ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕುಶಾಲನಗರದಲ್ಲಿ ಸುಮಾರು ೩.೫ ಎಕರೆ ಪ್ರದೇಶದಲ್ಲಿ ಎರಡು ಮಹಡಿಯ

ಕುಶಾಲನಗರದಲ್ಲಿ ಸುಮಾರು ೩.೫ ಎಕರೆ ಪ್ರದೇಶದಲ್ಲಿ ಎರಡು ಮಹಡಿಯ ಕಟ್ಟಡ ನಿರ್ಮಾಣವಾಗಲಿದೆ. ತಕ್ಷಣ ಕಾಮಗಾರಿ ಆರಂಭಗೊAಡು ಮಳೆಗಾಲಕ್ಕೆ ಮುನ್ನ ಬಹುತೇಕ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ತಿಳಿಸಿದರು.

ಸಮಸ್ಯೆಗಳಿಗೆ ಪರಿಹಾರ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ರಾಜ್ಯ ಉನ್ನತ ಶಿಕ್ಷಣ ಸಚಿವರ ಮೂಲಕ ಕೋಟಿಗಟ್ಟಲೆ ಮೌಲ್ಯದ ಜಾಗ ಕಂದಾಯ ಇಲಾಖೆಗೆ ಉಚಿತವಾಗಿ ದೊರಕಿದ್ದು ಈ ಮೂಲಕ ಕುಶಾಲನಗರ ತಾಲೂಕಿಗೆ ಪ್ರಜಾಸೌಧ ನಿರ್ಮಾಣ ಮಾಡಲು ಅವಕಾಶ ದೊರೆತಿದೆ. ಕ್ಷೇತ್ರದ ಜನತೆಯ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಕುಶಾಲನಗರ ನೂತನ ತಾಲೂಕಿಗೆ ಈಗಾಗಲೇ ಹೈಟೆಕ್ ಆಸ್ಪತ್ರೆ, ರಸ್ತೆ ಸಾರಿಗೆ ಡಿಪೋ ಮತ್ತಿತರ ಯೋಜನೆಗಳು ಲಭ್ಯವಾಗಿದ್ದು ಇದೀಗ ಪ್ರಜಾಸೌಧಕ್ಕೆ ಕಂದಾಯ ಸಚಿವರಿಂದ ಎಲ್ಲ ರೀತಿಯ ಸಹಕಾರ ದೊರೆತಿದೆ ಎಂದರು. ಜಿಲ್ಲೆಯಲ್ಲಿ ಇರುವ ಕಂದಾಯ ಇಲಾಖೆಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸರಕಾರಿ ಸೌಲಭ್ಯಗಳು ಕಟ್ಟಕಡೆಯ ಪ್ರಜೆಗೆ ತಲುಪುವ ಕೆಲಸ ಆಗಬೇಕಾಗಿದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯತತ್ಪರರಾಗಬೇಕಾಗಿದೆ ಎಂದರು.

ಸರಕಾರಿ ಕೆಲಸದಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಇರುವುದಿಲ್ಲ ನೇರವಾಗಿ ಸಾರ್ವಜನಿಕರ ಸಂಪರ್ಕ ಹೊಂದುವ ನಿಟ್ಟಿನಲ್ಲಿ ಪ್ರಜಾಸೌಧ ಕಾರ್ಯ ನಿರ್ವಹಿಸಲಿದೆ ಎಂದರು. ೧೧ ತಿಂಗಳ ಅವಧಿಯಲ್ಲಿ ನೂತನ ಕಟ್ಟಡ ನಿರ್ಮಾಣಗೊಳ್ಳಲಿದೆ. ಒಂದೇ ಕಟ್ಟಡದಲ್ಲಿ ೧೪ ಇಲಾಖೆಗಳು ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ನೀಡಿದರು.

ಕುಶಾಲನಗರ ತಾಲೂಕು ಕಾರ್ಯ ಗ್ರಾಮ ಸ್ವರೂಪದ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಬಾಬು ಮಾಹಿತಿ ನೀಡಿದರು. ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಆಶಯ ನುಡಿಗಳನ್ನಾಡಿ ತಾಲೂಕು ಹೋರಾಟದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್‌ರಾಜ, ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಮತ್ತಿತರ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.