ಸುಂಟಿಕೊಪ್ಪ, ನ. ೧೩: ಸಂತ ಮೇರಿಸ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಜೀವಿಕಾ ಚಿಕ್ಕಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಚಿಕ್ಕಬಳ್ಳಾಪುರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾಳೆ.

ಜೀವಿಕಾ ಅವರ ತಂದೆ ರಾಜ್‌ಕುಮಾರ್ ಅವರು ಭಾರತೀಯ ಸೇನೆಯಲ್ಲಿ ಯೋಧರಾಗಿದ್ದು, ತಾಯಿ ಲಕ್ಷ್ಮಿ ಅವರು ಮಡಿಕೇರಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ೧೦ನೇ ತರಗತಿಯ ವಿದ್ಯಾರ್ಥಿ ದಿಗಂತ್ ಹಾಗೂ ೮ನೇ ತರಗತಿಯ ಸಾಥ್ವಿಕ್ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ೮ನೇ ತರಗತಿಯ ವಿದ್ಯಾರ್ಥಿ ಮನೀಶ್ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ.

ಮುಕೇಶ್ ಎ., ಅಕ್ಷಯ್ ಹಾಗೂ ಅಂಕಿತ್ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ.