ಪೆರಾಜೆ, ನ. ೧೩: ಪೆರಾಜೆ ಗ್ರಾ.ಪಂ. ವ್ಯಾಪ್ತಿಯ ಎಂ. ಚೆಂಬು ಗ್ರಾಮದ ವೀರಪ್ಪ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂದಿಸಿದ್ದಾರೆ.
ಕಳೆದ ತಾ.೫ ರಂದು ವೀರಪ್ಪ ಅವರ ಮನೆಗೆ ನುಗ್ಗಿದ್ದ ಕಳ್ಳರು ರೂ.೧೫ ಸಾವಿರ ನಗದು ಮತ್ತು ೧೨೦ ಗ್ರಾಂ ತೂಕದ ಚಿನ್ನಾಭರಣ ಕಳವು ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಡಿವೈಎಸ್ಪಿ ಸೂರಜ್ ಮಾರ್ಗದರ್ಶನದಲ್ಲಿ, ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ತಂಡದವರು ತನಿಖೆ ಕೈಗೊಂಡು ಆರೋಪಿಗಳಾದ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಸಿದ್ದಲಿಂಗ (೨೮) ಹಾಗೂ ರಘು (೨೫) ಎಂಬವರುಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ರೂ. ೮.೫೦ ಲಕ್ಷ ನಗದು ಹಾಗೂ ೧೨೦ ಗ್ರಾಂ ಚಿನ್ನವನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.