ಗೋಣಿಕೊಪ್ಪಲು, ನ. ೧೩: ಗೋಣಿಕೊಪ್ಪಲುವಿನ ಕಾಪ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ವಿಜ್ಞಾನ ದಿನಾಚರಣೆಯನ್ನು ಆಚರಿಸಿ ಹೊಸ ಕಂಪ್ಯೂಟರ್ ಪ್ರಯೋಗಾಲಯವನ್ನು ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ವಿವಿಧ ವಿಜ್ಞಾನದ ಮಾದರಿಗಳು ಗಮನ ಸೆಳೆದವು. ಮಾದರಿ ಪ್ರದರ್ಶನಗಳ ಜೊತೆಗೆ ಆಕರ್ಷಕ ಪ್ರಾಯೋಗಿಕ ಚಟುವಟಿಕೆಗಳನ್ನು ನಡೆಸಲಾಯಿತು.

ವಿದ್ಯಾರ್ಥಿಗಳು ಗಣಿತ ಪ್ರಯೋಗಾಲಯ ವಿಜ್ಞಾನ ವಸ್ತು ಸಂಗ್ರಹಾಲಯ, ಭೌತಶಾಸ್ತç ಪ್ರಯೋಗಾಲಯ, ರಸಾಯನಶಾಸ್ತç ಪ್ರಯೋಗಾಲಯ ಮತ್ತು ಜೀವಶಾಸ್ತç ಪ್ರಯೋಗಾಲಯ ಸೇರಿದಂತೆ ವಿವಿಧ ಪ್ರಯೋಗಾಲಯಗಳು ಮತ್ತು ಕಲಿಕಾ ಕೇಂದ್ರಗಳಿಗೆ ಭೇಟಿ ನೀಡಿ ವೀಕ್ಷಿಸಿದರು.

ಕೂರ್ಗ್ ಪಬ್ಲಿಕ್ ಸ್ಕೂಲ್ ಮತ್ತು ಪಿ.ಯು. ಕಾಲೇಜಿನ ಪ್ರಾಂಶುಪಾಲ ಡಾ. ಎಂ. ರಾಮಚಂದ್ರನ್ ಮಾತನಾಡಿ, ಆಧುನಿಕ ವ್ಯವಸ್ಥೆಗಳು ಮತ್ತು ಸುಧಾರಿತ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ. ಕಂಪ್ಯೂಟರ್ ಲ್ಯಾಬ್ ಬೋಧನಾ ಕಲಿಕಾ ಪ್ರಕ್ರಿಯೆ ತಂತ್ರಜ್ಞಾನ ಮತ್ತು ಪ್ರಾವೀಣ್ಯತೆಯನ್ನು ಸಂಯೋಜಿಸುವತ್ತ ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದರು.