ಮಡಿಕೇರಿ, ನ. ೧೩ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ವಸತಿ ಗೃಹದಲ್ಲಿ ಕೆಲಸ ಮಾಡಿಕೊಂಡಿದ್ದ ಅಸ್ಸಾಂ ಮೂಲದ ದಿಲೀಪ್ ಶರ್ಮಾ (೩೬) ಎಂಬಾತನನ್ನು ಕೊಲೆ ಮಾಡಿದ ಆರೋಪಿ ದಯಾನಂದ ಪ್ರಸಾದ್ (೪೧) ಎಂಬಾತನನ್ನು ಪೊಲೀಸರು ಬಂದಿಸಿ ನ್ಯಾಯಾಂಗವಶಕ್ಕೊಪ್ಪಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಸೂರಜ್, ಠಾಣಾಧಿಕಾರಿ ಚಂದ್ರಶೇಖರ್, ಅಪರಾಧ ಪತ್ತೆದಳ ಸಿಬ್ಬಂದಿಗಳು ಆರೋಪಿಯನ್ನು ಬಂದಿಸಿ ಕಾನೂನು ಕ್ರಮಕೈಗೊಳ್ಳಲಾಗಿದೆ.