ಸೋಮವಾರಪೇಟೆ, ನ .೧೩: ಸಮೀಪದ ಹಾನಗಲ್ಲು ಶೆಟ್ಟಳ್ಳಿ ಗ್ರಾಮದ ಚಂದ್ರೋದಯ ಯುವಕ ಸಂಘ, ಸ್ವ ಸಹಾಯ ಸಂಘಗಳು ಹಾಗೂ ಗ್ರಾಮಸ್ಥರ ಸಹಯೋಗದೊಂದಿಗೆ ತಾ. ೧೫ರಂದು ಹಾನಗಲ್ಲು ಶೆಟ್ಟಳ್ಳಿ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಮತ್ತು ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ. ಇದರೊಂದಿಗೆ ೩೪ನೇ ವರ್ಷದ ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ ಎಂದು ಯುವಕ ಸಂಘದ ಅಧ್ಯಕ್ಷ ಸಚಿನ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. ೧೫ರಂದು ಬೆಳಿಗ್ಗೆ ೯ ಗಂಟೆಗೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ಅಧ್ಯಕ್ಷತೆಯನ್ನು ಹಾನಗಲ್ಲು ಗ್ರಾ.ಪಂ. ಅಧ್ಯಕ್ಷ ಯಶಾಂತ್‌ಕುಮಾರ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಡಾ. ಮಂತರ್ ಗೌಡ, ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ, ಗ್ರಾ.ಪಂ. ಸದಸ್ಯ ಡಿ.ಎಸ್. ಸುರೇಶ್ ರಘು, ನತೀಶ್ ಮಂದಣ್ಣ, ರಾಮಣ್ಣ ಸಿದ್ದಲಿಂಗಪುರ, ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ, ವಿಎಸ್‌ಎಸ್‌ಎನ್ ಸದಸ್ಯ ಭಾನುಪ್ರಕಾಶ್, ವೈದ್ಯ ರಾಕೇಶ್ ಪಟೇಲ್, ಪ್ರಮುಖರಾದ ಡಿ.ಯು. ಕಿರಣ್, ಮುಖ್ಯಶಿಕ್ಷಕ ಬಿ.ಎಂ. ಸತೀಶ್ ಅವರುಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
೧೦ ಗಂಟೆಗೆ ಜಿಲ್ಲಾ ಮಟ್ಟದ ಮಹಿಳೆಯರ ಥ್ರೋಬಾಲ್ ಪಂದ್ಯಾವಳಿ ಆರಂಭವಾಗಲಿದ್ದು, ಪ್ರಥಮ ಬಹುಮಾನವಾಗಿ ೫ ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ ೩ ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ಪುರುಷರ ವಾಲಿಬಾಲ್ ಪಂದ್ಯಾಟದ ಪ್ರಥಮ ಬಹುಮಾನ ೧೫ ಸಾವಿರ ನಗದು, ದ್ವಿತೀಯ ೧೦ ಹಾಗೂ ತೃತೀಯ ೫ ಸಾವಿರ ನಗದು ಸೇರಿದಂತೆ ಟ್ರೋಫಿಗಳನ್ನು ನೀಡಲಾಗುವುದು. ಭಾಗವಹಿಸುವ ತಂಡಗಳು ತಾ. ೧೪ರ ಸಂಜೆ ೫ ಗಂಟೆಯೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು. ಇದರೊಂದಿಗೆ ೩೪ನೇ ವರ್ಷದ ಗ್ರಾಮೀಣ ಕ್ರೀಡಾಕೂಟವನ್ನೂ ಆಯೋಜಿಸಿದ್ದು, ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ, ಪುರುಷರ ವಿಭಾಗದಲ್ಲಿ ಕಬಡ್ಡಿ, ಹಗ್ಗಜಗ್ಗಾಟ, ಮಹಿಳೆಯರ ವಿಭಾಗದಲ್ಲಿ ಥ್ರೋಬಾಲ್, ಹಗ್ಗಜಗ್ಗಾಟ, ವಿಷದ ಚೆಂಡು, ೫೦ ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಮಡಿಕೆ ಒಡೆಯುವ ಸ್ಪರ್ಧೆ, ದಂಪತಿ ಓಟ ಸ್ಪರ್ಧೆಗಳು ನಡೆಯಲಿವೆ ಎಂದು ಸಚಿನ್ ಮಾಹಿತಿ ನೀಡಿದರು.
ರಾತ್ರಿ ೮ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ಎಲ್.ಬಿ. ಉಲ್ಲಾಸ್, ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಗ್ರಾ.ಪಂ. ಸದಸ್ಯ ಮಿಥುನ್ ಹೆಚ್.ವಿ., ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಚೌಡ್ಲು ಗ್ರಾ.ಪಂ. ಸದಸ್ಯ ಮಹೇಶ್ ತಿಮ್ಮಯ್ಯ, ವಕೀಲ ಬಿ.ಜೆ. ದೀಪಕ್, ಪ್ರಮುಖರಾದ ಜಾನಕಿ ವೆಂಕಟೇಶ್, ಸಿ.ಕೆ. ರಾಘವೇಂದ್ರ, ಹೆಚ್.ಆರ್. ಪೃಥ್ವಿ, ದಿಲೀಪ್, ಡಿ.ಜಿ. ದಿನೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಕ್ರೀಡಾಕೂಟದ ಹೆಚ್ಚಿನ ಮಾಹಿತಿಗೆ ಮೊ:೯೪೪೯೬೮೨೬೦೬, ೮೨೭೭೨೭೮೮೦೬, ೭೭೬೦೫೩೫೯೮೪ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದರು. ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ದಿಲೀಪ್, ಪದಾಧಿಕಾರಿಗಳಾದ ಶೋಭರಾಜ್, ಡಿ.ಎಂ. ಜೋಯಪ್ಪ, ಸ್ವಾಗತ್ ಉಪಸ್ಥಿತರಿದ್ದರು.