ಬೆಂಗಳೂರು, ನ. ೧೩: ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ಡ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ೪ಐದÀನೇ ಪುಟಕ್ಕೆ (ಮೊದಲ ಪುಟದಿಂದ) ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ ೧೫-೨೦ ಹುಲಿಗಳನ್ನು ಡ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಿ ಎನ್ನುವ ಸೂಚನೆ ನೀಡಿದರು. ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕಾ÷್ವಡ್‌ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು, ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಈ ಕೆಳಗಿನ ಎಂಟು ಅಂಶದ ಕಾರ್ಯಕ್ರಮಕ್ಕೆ ಅಸ್ತು ಎಂದರು.