ವೀರಾಜಪೇಟೆ, ನ. ೧೪: ಸಮಾಜದ ದುರ್ಬಲ ವರ್ಗದವರಿಗೆ ಉಚಿತ ಕಾನೂನು ಸೇವೆಗಳ ನೆರವಿನ ಲಭ್ಯತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಪ್ರತಿವರ್ಷ ರಾಷ್ಟಿçÃಯ ಕಾನೂನು ಸೇವೆಗಳ ದಿನವನ್ನು ಆಚರಿಸಲಾಗುತ್ತದೆ ಎಂದು ೨ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಟರಾಜ್ ಹೇಳಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐ,ಕ್ಯೂ.ಎ.ಸಿ. ಘಟಕ, ರಾಜ್ಯಶಾಸ್ತç ವಿಭಾಗ ಹಾಗೂ ವೀರಾಜಪೇಟೆ ತಾಲೂಕು ಕಾನೂನು ಸೇವೆಗಳ ಸಮಿತಿ, ವೀರಾಜಪೇಟೆ ವಕೀಲರ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟಿçÃಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಟರಾಜ್ ಅವರು, ರಾಷ್ಟಿçÃಯ ಕಾನೂನು ಸೇವೆಗಳ ದಿನದ ಇತಿಹಾಸ, ಬೆಳವಣಿಗೆಯನ್ನು ವಿವರಿಸಿ, ಕಾನೂನು ಸೇವಾ ಪ್ರಾಧಿಕಾರಗಳ ಕಾಯಿದೆ ೧೯೮೭ ಜಾರಿಗೊಂಡ ದಿನದ ಸ್ಮರಣಾರ್ಥವಾಗಿ ಪ್ರತಿ ವರ್ಷ ರಾಷ್ಟಿçÃಯ ಕಾನೂನು ಸೇವೆಗಳ ದಿನವನ್ನು ಆಚರಿಸಲಾಗುತ್ತದೆ. ರಾಷ್ಟಿçÃಯ ಕಾನೂನು ಸೇವೆಗಳ ದಿನದಂದು ಕಾನೂನು ಜಾಗೃತಿ ಶಿಬಿರಗಳು, ಉಚಿತ ಕಾನೂನು ಸೇವೆಗಳ ನೆರವಿನ ಲಭ್ಯತೆ ಬಗ್ಗೆ ಜನರಿಗೆ ಅರಿವು ಮೂಡಿಸುವಂತಹ ಕಾರ್ಯವನ್ನು ಮಾಡಲಾಗುತ್ತದೆ ಎಂದರು.
ಕಾನೂನು ಸೇವೆಗಳ ಪ್ರಾಧಿಕಾರದ ಕಾಯಿದೆ ಮೂಲಕ ಸಮಾಜದ ಹಿಂದುಳಿದ ವರ್ಗಗಳು, ಆರ್ಥಿಕವಾಗಿ ದುರ್ಬಲವಿರುವ ವರ್ಗಗಳು ಮತ್ತು ವಿಶೇಷಚೇತನರಿಗೆ ಉಚಿತ ಕಾನೂನು ನೆರವನ್ನು ಪಡೆಯುವ ಹಕ್ಕನ್ನು ನೀಡಲಾಗಿದೆ. ಯುವ ಸಮುದಾಯದಲ್ಲಿ ಕಾನೂನಿನ ಜಾಗೃತಿಯ ಕೊರತೆಯಿಂದಾಗಿ ದಿನನಿತ್ಯದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳ ಕುರಿತಾಗಿ ಕಾನೂನಿನ ಬೆಂಬಲವನ್ನು ಪಡೆಯುವಂತೆ ಕಿವಿಮಾತು ಹೇಳಿದರು.
ವೀರಾಜಪೇಟೆ ಜೆ.ಎಂ.ಎಫ್.ಸಿ. ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ್ ಆರ್. ಮಾತನಾಡಿ, ಕಾನೂನು ವ್ಯವಸ್ಥೆಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ವ್ಯಕ್ತಿ ಬಡವನಾಗಿರಲಿ, ವಿಶೇಷಚೇತನ ರಾಗಿರಲಿ, ಸಮಾಜದ ದುರ್ಬಲ ವರ್ಗದವನಾಗಿರಲಿ ಎಲ್ಲರಿಗೂ ನ್ಯಾಯ ಪಡೆಯುವ ಸಮಾನ ಅವಕಾಶವಿದೆ. ಅವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು ಉಚಿತ ಕಾನೂನು ನೆರವು ಮತ್ತು ಉಚಿತ ಸಮಾಲೋಚನೆಯನ್ನು ನೀಡಲಾಗುತ್ತದೆ. ಹೀಗೆ ಜನರಿಗೆ ನ್ಯಾಯ ಪಡೆಯುವ ಹಕ್ಕಿನ ಬಗ್ಗೆ ಅರಿವು ಮೂಡಿಸುವುದು ಎಲ್ಲರ ಕರ್ತವ್ಯವಾಗಿದೆ. ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ನಾಗರಿಕರಿಗೆ ಇರಬೇಕಾದ ವಿವಿಧ ಕಾನೂನುಗಳ ಬಗ್ಗೆ ತಿಳಿಸಿದರು.
ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಸಿ.ಕೆ. ಪೂವಣ್ಣ ಮಾತನಾಡಿ, ಕಾನೂನು ಎಂಬುದು ಕೇವಲ ನ್ಯಾಯಾಲಯಕ್ಕಾಗಲೀ, ವಕೀಲರಿಗಾಗಲಿ ಮಾತ್ರವೇ ಸೀಮಿತವಲ್ಲ. ಪ್ರತೀ ವ್ಯಕ್ತಿಯು ಪ್ರತೀ ಹಂತದಲ್ಲಿ ಕಾನೂನಿನ ವ್ಯಾಪ್ತಿಗೆ ಒಳಪಡುತ್ತಾನೆ. ಆದ್ದರಿಂದ ವಿಶೇಷವಾಗಿ ಯುವ ಸಮುದಾಯವು ಇಂತಹ ಕಾರ್ಯಕ್ರಮಗಳಿಂದ ಪಡೆದ ಮಾಹಿತಿಗಳನ್ನು ತಮ್ಮ ಸುತ್ತಮುತ್ತಲಿನ ಸಮಾಜದ ಜನರಿಗೆ ತಿಳಿಸುವ ಮೂಲಕ, ಜವಾಬ್ದಾರಿಯುತ ಪ್ರಜೆಯಾಗಬೇಕೆಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸರಸ್ವತಿ ಡಿ.ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ, ವ್ಯವಸ್ಥೆಯಲ್ಲಿ ಕಾನೂನು ಅರಿವಿನ ಮೂಲಕ ಮಾತ್ರವೇ ತನ್ನನ್ನು ತಾನು ಉತ್ತಮಪಡಿಸಿಕೊಳ್ಳಬಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವೀರಾಜಪೇಟೆ ಜೆ.ಎಂ.ಎಫ್.ಸಿ. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರದೀಪ ಪೋತೆದಾರ, ವೀರಾಜಪೇಟೆ ವಕೀಲ ಅಮೃತ್ ಸೋಮಯ್ಯ, ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕ ಪ್ರೊ.ಬಸವರಾಜು ಕೆ., ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥ ದಿವ್ಯ ಎಂ.ಬಿ. ಉಪಸ್ಥಿತರಿದ್ದರು. ತೃತೀಯ ಬಿ.ಎ ವಿದ್ಯಾರ್ಥಿನಿ ವಂದನಾ, ರಾಜ್ಯಶಾಸ್ತç ಉಪನ್ಯಾಸಕರಾದ ಹೇಮಂತ್‌ಕುಮಾರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.