ಕುಶಾಲನಗರ, ನ. ೧೪ : ಸ್ವಚ್ಛ ಭಾರತ್ ಮಿಷನ್- ೨.೦ ಸಾಮರ್ಥ್ಯ ಅಭಿವೃದ್ಧಿ ಘಟಕದಡಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಕುರಿತು ಒಂದು ದಿನದ ಕಾರ್ಯಾಗಾರ ಕುಶಾಲನಗರ ಪುರಸಭಾ ಸಭಾಂಗಣದಲ್ಲಿ ನಡೆಯಿತು.
ಪುರಸಭೆ ಮುಖ್ಯಾಧಿಕಾರಿ ಟಿ ಜೆ ಗಿರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಸಂಪತ್ ಡಿ.ಎಂ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು.
ಜಿಲ್ಲಾ ನಗರ ಅಭಿವೃದ್ಧಿ ಕೋಶ ಘನತ್ಯಾಜ್ಯ ನಿರ್ವಹಣಾ ತಜ್ಞರಾದ ಕೀರ್ತಿ ಪ್ರಸಾದ್ ಎಂ ª+++++ÀÄತ್ತು ಕುಶಾಲನಗರ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಉದಯಕುಮಾರ್ ನೇತೃತ್ವದಲ್ಲಿ ಒಂದು ದಿನದ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಕಾರ್ಯಾಗಾರ ನಡೆಯಿತು.
ತ್ಯಾಜ್ಯ ನಿರ್ವಹಣೆಯನ್ನು ಮಾಡುವ ವಿಧಾನ, ವಾಹನ ಚಾಲಕರ ಜವಾಬ್ದಾರಿ ಹಾಗೂ ನಾಗರಿಕರೊಂದಿಗೆ ಸಂವಾದ ಕಾರ್ಯಕ್ರಮ ಬಗ್ಗೆ, ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸುವ ವಿಧಾನ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಸುರಕ್ಷಾ ಧಿರಿಸುಗಳನ್ನು ಯಾವ ರೀತಿ ಯಾವ ಸಂದರ್ಭದಲ್ಲಿ ಬಳಸಬೇಕೆಂಬುದನ್ನು ತಿಳಿಸಲಾಯಿತು.
ಘನ ತ್ಯಾಜ್ಯ ನಿರ್ವಹಣಾ ಘಟಕದ ನಿರ್ವಹಣೆ ಮತ್ತು ಎಂ.ಆರ್.ಎಫ್ ಘಟಕದ ನಿರ್ವಹಣೆಯನ್ನು ಹೇಗೆ ಮಾಡಬೇಕೆಂದು ಅರಿವು ಮೂಡಿಸಲಾಯಿತು. ಕಾರ್ಯಾಗಾರದಲ್ಲಿ ಪುರಸಭೆಯ ಪೌರಕಾರ್ಮಿಕರು, ವಾಹನ ಚಾಲಕರು, ಲೋಡರ್ಸ್ ಹಾU