ಶ್ರೀನಗರ, ನ. ೧೫: ಶ್ರೀನಗರದ ನೌಗಾಂ ಪೊಲೀಸ್ ಠಾಣೆಯಲ್ಲಿ ತಾ. ೧೪ ರ ರಾತ್ರಿ ೧೧.೨೦ಕ್ಕೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ೯ ಮಂದಿ ಸಾವನ್ನಪ್ಪಿ, ೩೨ ಮಂದಿ ಗಾಯಗೊಂಡಿದ್ದಾರೆ. ಉಗ್ರರಿಂದ ವಶಪಡಿಸಿಕೊಂಡಿದ್ದ ಸ್ಫೋಟಕಗಳೇ ಇದಕ್ಕೆ ಕಾರಣ ಎನ್ನಲಾಗಿದ್ದು, ಅವುಗಳ ಸಂಗ್ರಹದಲ್ಲಿ ಲೋಪ ಅಥವಾ ಬೇರೆ ಕಾರಣಗಳಿಂದ ಸ್ಫೋಟ ಆಗಿದೆಯಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಘಟನೆಯಲ್ಲಿ ಒಬ್ಬ ತನಿಖಾಧಿಕಾರಿ, ಇಬ್ಬರು ಕಂದಾಯ ಅಧಿಕಾರಿಗಳು, ಮೂವರು ವಿಧಿ ವಿಜ್ಞಾನ ತಜ್ಞರು, ಇಬ್ಬರು ಛಾಯಾಗ್ರಾಹಕರೂ ಮೃತರಾಗಿದ್ದು, ಠಾಣೆಗೆ ಹೊಂದಿಕೊAಡಿದ್ದ ಕೆಲ ಕಟ್ಟಡಗಳಿಗೂ ಹಾನಿಯಾಗಿದ್ದು ಇದರಲ್ಲಿನ ಓರ್ವ ಮೃತರಾಗಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳ ವಿರುದ್ಧದ ಕಾರ್ಯಾಚರಣೆ ವೇಳೆ ಜಪ್ತಿ ಮಾಡಿ ಸಂಗ್ರಹಿಸಿ ಇಟ್ಟಿದ್ದ ಸ್ಫೋಟಕಗಳೇ ಬ್ಲಾಸ್ಟ್ ಆಗಿದ್ದು ದುರಂತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಸ್ಫೋಟಕಗಳನ್ನು ಸಂಗ್ರಹಿಸಿ ಇಡುವಾಗ ಆದ ಲೋಪದಿಂದ ಸ್ಫೋಟ ಸಂಭವಿಸಿತೇ? ಅಥವಾ ಬೇರೆ ಏನಾದರೂ ಕಾರಣ ಇದೆಯೇ ಎಂಬ ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ. ತನಿಖೆಯಿಂದಷ್ಟೆ ನಿಖರ ಮಾಹಿತಿ ತಿಳಿಯಲಿದೆ.

ಕಳೆದ ವಾರ ನವದೆಹಲಿಯ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಸಂಭವಿಸಿ ೧೩ ಮಂದಿ ಸಾವಿಗೀಡಾಗಿದ್ದರು. ಅದಕ್ಕೂ ಮುನ್ನ ದೊಡ್ಡ ಪ್ರಮಾಣದ ಉಗ್ರ ನಿಗ್ರಹ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಹರಿಯಾಣದ ಫರಿದಾಬಾದ್‌ನಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದರು. ಅವುಗಳ ಬಂಧಿತ ಉಗ್ರ ವೈದ್ಯ ಮುಜಮ್ಮಿಲ್ ಗನೈ ಬಾಡಿಗೆ ಮನೆಯಿಂದ ವಶಪಡಿಸಿಕೊಂಡ ಸ್ಫೋಟಕಗಳ ಪೈಕಿ ಒಂದಷ್ಟು ಮಾದರಿಯನ್ನು ನೌಗಾಮ್ ಪೊಲೀಸ್ ಠಾಣೆಯ ವಿಧಿವಿಜ್ಞಾನ ೬ನೇ ಪುಟಕ್ಕೆ (ಮೊದಲ ಪುಟದಿಂದ) ಪ್ರಯೋಗಾಲಯದಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಮೂಲಗಳ ಪ್ರಕಾರ, ಘಟನಾ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಸ್ಫೋಟಕಗಳು ಇದ್ದವು. ಎಫ್.ಎಸ್.ಎಲ್ ತಂಡವು ಕಳೆದ ಎರಡು ದಿನಗಳಿಂದ ಇದರ ಬಗ್ಗೆ ತನಿಖೆ ನಡೆಸುತ್ತಿತ್ತು.

ತಜ್ಞರ ಪ್ರಕಾರ, ಸಂಭವಿಸಿದ್ದ ಸ್ಫೋಟ ಮಾನವ ದೋಷ ಅಥವಾ ಲೋಪದಿಂದ ಆದ ಸ್ಫೋಟವಲ್ಲ. ಬದಲಿಗೆ, ತಾಪಮಾನ, ರಾಸಾಯನಿಕ ಸಂಯೋಜನೆ ಮತ್ತು ಕೆಲವು ವಿಶೇಷ ಅಂಶಗಳಿಗೆ ಸ್ಫೋಟಕಗಳು ಒಡ್ಡಿಕೊಂಡಾಗ ಸ್ಫೋಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ತನಿಖಾ ತಂಡ ತನಿಖೆ ನಡೆಸುತ್ತಿದೆ.