ಕೂಡಿಗೆ, ನ. ೧೬: ಜಲ ಸಂಪನ್ಮೂಲ ಇಲಾಖೆ, ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಧಾರವಾಡ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕಾವೇರಿ ಜಲಾನಯನ ಯೋಜನೆ, ಹಾರಂಗಿ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಸಹಕಾರ ಮಹಾಮಂಡಳ ಕುಶಾಲನಗರ, ತೊರೆನೂರು ನೀರು ಬಳಕೆದಾರರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಹಾಲು ಉತ್ಪಾದಕರ ಸಹಕಾರ ಸಂಘ ಸಂಯುಕ್ತ ಆಶ್ರಯದಲ್ಲಿ ತಾ.೧೮ರಂದು ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹವು ತೊರೆನೂರಿನ ಸಂಘದ ಆವರಣದಲ್ಲಿ ನಡೆಯಲಿದೆ ಎಂದು ತೊರೆನೂರು ನೀರು ಬಳಕೆದಾರ ಸಂಘದ ಅಧ್ಯಕ್ಷ ಟಿ.ಕೆ. ಪಾಂಡುರAಗ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಧಾರವಾಡ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ ನಿರ್ದೇಶಕ ಡಾ. ಗಿರೀಶ್ ಎನ್.ಮರಡ್ಡಿ, ದಿವ್ಯ ಸಾನಿಧ್ಯವನ್ನು ಶ್ರೀ ಮಲ್ಲೇಶಸ್ವಾಮಿ, ಮುಖ್ಯ ಅತಿಥಿಗಳಾಗಿ ಜಿಲ್ಲಾ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ. ಗಣಪತಿ, ಮೈಸೂರು ಕಾಡಾ, ಕಾವೇರಿ ಜಲಾನಯನ ಯೋಜನೆಯ ಅಧ್ಯಕ್ಷ ಪಿ. ಮರಿಸ್ವಾಮಿ, ಹಾರಂಗಿ ಮಹಾಮಂಡಲದ ಅಧ್ಯಕ್ಷ ಎಸ್. ಪಿ ಚೌಡೇಗೌಡ ಸೇರಿದಂತೆ ಇಲಾಖೆಯ ಅಧಿಕಾರಿ ವರ್ಗದವರು, ವಿವಿಧ ಸಹಕಾರ ಸಂಘಗಳು ಅಧ್ಯಕ್ಷರುಗಳು, ಜನಪ್ರತಿನಿಧಿಗಳು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.