ನವದೆಹಲಿ, . ೧೭ : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಸಂಬAಧಿಸಿದAತೆ ಬಹುದಿನಗಳಿಂದ ಬಾಕಿಯಿರುವ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದಾರೆ. ಇಂದು ಸಂಜೆ ಪ್ರಧಾನಿ ಮೋದಿ ಭೇಟಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, ೨,೧೦೦ ಕೋಟಿ ರೂ.ಗಳಿಗೂ ಹೆಚ್ಚು ಪ್ರವಾಹ ಪರಿಹಾರ ಬಿಡುಗಡೆ ಮತ್ತು ನಿರ್ಣಾಯಕ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಿದ್ದೇನೆ. ರಾಯಚೂರು ಜಿಲ್ಲೆಯು ಆರೋಗ್ಯ ರಕ್ಷಣೆ, ಶಿಕ್ಷಣ ಹಾಗೂ ತಲಾ ಆದಾಯದ ಮಟ್ಟದಲ್ಲಿ ಆರಂಭಿಕ ಹಂತದಲ್ಲಿದೆ. ದಲಿತರು ಹಾಗೂ ಹಿಂದುಳಿದ ವರ್ಗಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಯ ಜನರಿಗೆ ಗುಣಮಟ್ಟದ ರೆಫರೆಲ್ ವೈದ್ಯಕೀಯ ಕೇಂದ್ರದ ಅಗತ್ಯತೆಯನ್ನು ಪೂರೈಸಲು ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆಯನ್ನು ನೀಡುವಂತೆ ಮನವಿಪತ್ರದಲ್ಲಿ ಕೋರಲಾಗಿದೆ ಎಂದರು.

ಪ್ರವಾಹ ಪರಿಹಾರಕ್ಕೆ ಮನವಿ

ರಾಜ್ಯದಲ್ಲಿ ಒಟ್ಟು ೧೪,೫೮,೦೦೦ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಆ ಕುರಿತು ನಾವು ಜಂಟಿ ಸಮೀಕ್ಷೆ ಮಾಡಿಸಿದ್ದೇವೆ. ರಾಜ್ಯದಲ್ಲಿ ಒಟ್ಟು ೩,೫೬೦ ಕೋಟಿ ನಷ್ಟವಾಗಿದ್ದು, ಮಳೆಯಿಂದಾಗಿ ಮೂಲ ಸೌಕರ್ಯ ಗಳಿಗೂ ಹಾನಿಯಾಗಿರುವ ಬಗ್ಗೆ ಪ್ರಧಾನಮಂತ್ರಿಯವರಿಗೆ ಮನವರಿಕೆ ಮಾಡಿದ್ದೇವೆ. ೪ಏಳ ಇದಲ್ಲದೇ ಸಾವಿರಾರ ಮನೆಗಳು, ರಸ್ತೆ ಹಾಗೂ ಶಾಲೆಗಳು ಹಾನಿಗೀಡಾಗಿದ್ದು ಎನ್.ಡಿ.ಆರ್ ಎಫ್ ವತಿಯಿಂದ ಪರಿಹಾರವನ್ನು ಕೋರಿ ಎರಡು ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ೨,೧೩೬ ಕೋಟಿ ರೂ.ಗಳ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸಿಎಂ ಆಗ್ರಹಿಸಿದರು.