ಮಡಿಕೇರಿ ನ.೧೭ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ೨೩ರಿಂದ ೨೯ರವರೆಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯುವ ಡೈಮಂಡ್ ಜ್ಯೂಬಿಲಿ ಜಂಬೂರಿ ಹಾಗೂ ೧೯ನೇ ರಾಷ್ಟಿçÃಯ ಜಂಬೂರಿಗೆ ನಾಪೋಕ್ಲುವಿನ ೬ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಕೊಡಗು ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ನಾಪೋಕ್ಲುವಿನ ಅಂಕೂರ್ ಪಬ್ಲಿಕ್ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಮಹೇಶ್ ಅವರನ್ನು ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಳೀಯ ಸಂಸ್ಥೆ ಸಂಪಾಜೆಯ ಅಧ್ಯಕ್ಷÀ ಧನಂಜಯ ಎಂ. ಹಾಗೂ ಕಾರ್ಯದರ್ಶಿ ಉಷಾರಾಣಿ ಕೆ.ಬಿ. ಅಭಿನಂದಿಸಿದರು.

ಶಾಲೆಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಅಂಕೂರ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ರತ್ನ ಚರ್ಮಣ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.