ಜಿದ್ದಾ, ನ. ೧೭: ಸೌದಿ ಅರೇ ಬಿಯಾದಲ್ಲಿ ಘೋರ ದುರಂತ ಸಂಭವಿಸಿದೆ. ಮೆಕ್ಕಾದಿಂದ ಮದೀ ನಾಗೆ ತೆರಳುತ್ತಿದ್ದ ಯಾತ್ರಿಕರ ಬಸ್ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ೪೫ ಭಾರತೀ ಯರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಟ್ಯಾಂಕರ್ಗೆ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಈ ದುರಂತದಲ್ಲಿ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ಹೆಚ್ಚಿನ ಪ್ರಯಾಣಿಕರು ನಿದ್ರಾವಸ್ಥೆಯಲ್ಲಿದ್ದ ಕಾರಣ ಸಾವು ಸಂಭವಿಸಿದೆ.
ಮೃತರಲ್ಲಿ ಹೆಚ್ಚಿನವರು ಹೈದರಾಬಾದ್ ಮೂಲದ ವರಾಗಿದ್ದು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಮದೀನಾ ಬಳಿ ಸಂಭವಿಸಿದ ಈ ದುರ್ಘಟನೆಯಲ್ಲಿ ಓರ್ವ ಯುವಕ ಪವಾಡ ಸದೃಶ್ಯ ರೀತಿಯಲ್ಲಿ ಬದುಕುಳಿದಿ ದ್ದಾನೆ. ಮೆಕ್ಕಾದಿಂದ ಮದೀನಾಕ್ಕೆ ಹೋಗುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದಾಗ ಚಾಲಕನ ಪಕ್ಕದಲ್ಲಿ ಕುಳಿತಿದ್ದ ೨೪ ವರ್ಷದ ಯುವಕ ಮೊಹಮ್ಮದ್ ಅಬ್ದುಲ್ ಶೋಯಾಬ್, ಧಗ ಧಗನೆ ಹೊತ್ತಿ ಉರಿಯುತ್ತಿದ್ದ ಬಸ್ನ ಕಿಟಕಿ ಮುರಿದು ಹಾರಿ ಪ್ರಾಣ ಉಳಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಶೋಯಾಬ್ ಹೈದರಾಬಾದ್ ನಿವಾಸಿಯಾಗಿದ್ದು, ಅವ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಆದರೆ ಅವರ ಸ್ಥಿತಿ ತಿಳಿದಿಲ್ಲ. ಈ ಕುರಿತು ಹೈದರಾಬಾದಿನಲ್ಲಿ ಮಾತನಾಡಿದ ಶೋಯಾಬ್ ಅವರ ಸಂಬAಧಿ ಮೊಹಮ್ಮದ್ ತೆಹಸೀನ್, ನಮ್ಮ ಕುಟುಂಬದಿAದ ಏಳು ಮಂದಿ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಕಳೆದ ವಾರ ಅವರು ಸೌಧಿಗೆ ಹೋಗಿದ್ದರು. ಯುವಕ ಬಸ್ನಿಂದ ಜಿಗಿದು ಹೊರ ಬಂದಿರುವುದಾಗಿ ತಿಳಿದುಬಂದಿದೆ. ೪ಏಳನೇ ಬೆಳಗಿನ ಜಾವ ೧.೩೦ ರ ಸುಮಾರಿಗೆ (ISಖಿ) ಡೀಸೆಲ್ ಟ್ಯಾಂಕರ್ಗೆ ಬಸ್ ಡಿಕ್ಕಿ ಹೊಡೆದಾಗ ಸುಮಾರು ೪೬ ಜನರು ಬಸ್ನಲ್ಲಿದ್ದರು ಎಂದು ಹೇಳಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ನೆರವು ನೀಡಲು ಸಹಾಯವಾಣಿ ಸ್ಥಾಪಿಸಲಾಗಿದೆ ಎಂದು ಜೆದ್ದಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಪ್ರಸ್ತುತ ರಷ್ಯಾ ಭೇಟಿಯಲ್ಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಪಘಾತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ತೀವ್ರ ಸಂತಾಪ
ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೪೨ ಮಂದಿ ಭಾರತೀಯರು ಸಾವನ್ನಪ್ಪಿರುವ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಮದೀನಾದಲ್ಲಿ ಸಂಭವಿಸಿರುವ ಅಪಘಾತದಲ್ಲಿ ಭಾರತೀಯರು ಸಾವನ್ನಪ್ಪಿರುವುದು ತೀವ್ರ ದುಃಖ ತಂದಿದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. ಇದೇ ವೇಳೆ ರಿಯಾದ್ನಲ್ಲಿರುವ ನಮ್ಮ ರಾಯಭಾರ ಕಚೇರಿ ಮತ್ತು ಜಿದ್ದಾದ ರಾಯಭಾರಿ ಕಚೇರಿ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುತ್ತಿದೆ. ನಮ್ಮ ಅಧಿಕಾರಿಗಳು ಸೌದಿ ಅರೇಬಿಯಾ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆAದು ತಿಳಿಸಿದ್ದಾರೆ.