ಸುಂಟಿಕೊಪ್ಪ: ಶಿಕ್ಷಣವನ್ನು ಪಡೆದು ದೇಶದ ಸತ್ಪçಜೆಗಳಾಗಿ ಮೂಡಿಬರಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ರಫೀಕ್ಖಾನ್ ಆಶಿಸಿದರು.
ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಮಕ್ಕಳ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ನೆಹರು ಅವರ ಆದರ್ಶ ಗುಣಗಳನ್ನು ವಾಚಿಸಿ ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಮಕ್ಕಳು ಶೃದ್ಧೆಯಿಂದ ಈಗಿನಿಂದಲೇ ಪಾಠಪ್ರವಚನಗಳತ್ತ ಚಿತ್ತವನ್ನು ಹರಿಸಿ ವ್ಯಾಸಂಗ ಮಾಡುವುದರಿಂದ ಉನ್ನತ ಶಿಕ್ಷಣಗಳಿಗೆ ಅನುಕೂಲಕರವಾದ ವಾತಾವರಣ ಸೃಷ್ಟಿಯಾಗÀಲಿದೆ ಎಂದರು.
ಸಮಾರAಭದಲ್ಲಿ ಮುಖ್ಯ ಅತಿಥಿಗಳಾಗಿ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ.ಬಿಜು ಪೋಷಕರಿಗೆ ಅಯೋಜಿತ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಶಾಲೆಯ ಸಹಶಿಕ್ಷಕಿ ಪ್ರೀತಿ ಜಾಯ್ಸ್ ದಿನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಾರಂಭದ ವೇದಿಕೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ ಬಹುಮಾನ ದಾನಿಗಳಾದ ಅಯ್ಯಪ್ಪ, ಶಾಲಾ ಮುಖ್ಯೋಪಾದ್ಯಾಯಿನಿ ಜೋವಿಟಾ ವಾಸ್, ವ್ಯವಸ್ಥಾಪಕರಾದ ಜೆಸ್ಸಿವೇಗಸ್ ಇದ್ದರು. ಕೂಡ್ಲೂರು : ಕೂಡ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ ಮಾತನಾಡಿದರು.ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಶ್ರೀ ಶಾರದ ಪೂಜೆ ಹಾಗು ಮಕ್ಕಳಿಗೆ ವಿವಿಧ ಕ್ರೀಡೆಯನ್ನು ಆಯೋಜಿಸಲಾಯಿತು.
ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿ ಸಿದ್ದ ವಿದ್ಯಾರ್ಥಿಗಳು ಸಂಭ್ರಮ ದಿಂದ ಪಾಲ್ಗೊಂಡರು. ಪುರೋಹಿತರಾದ ಶ್ರೀಪತಿಭಟ್ ರವರ ನೇತೃತ್ವದಲ್ಲಿ ಗಣಪತಿ ಹೋಮವನ್ನು ಹಾಗು ಶಾರದ ಪೂಜೆಯನ್ನು ನೆರವೇರಿಸ ಲಾಯಿತು. ವಿದ್ಯಾರ್ಥಿಗಳು ಸಾಮೂಹಿಕ ಭಕ್ತಿಗೀತೆಗಳನ್ನು ಹಾಡಿದರು. ಇದೇ ಸಂದರ್ಭ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಕಾರ್ಯಕ್ರಮಗಳು ಮತ್ತು ಸಾಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.
ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ಮುಳ್ಳಂಡ ರತ್ತು ಚಂಗಪ್ಪ, ಶಾಲಾ ಮುಖ್ಯೋಪಾಧ್ಯಾಯರಾದ ಕೆ. ತಿಲಕರವರು ಹಾಗೂ ಶಿಕ್ಷಕ ವೃಂದದವರು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಕಡಗದಾಳು : ಬೆಂಗಳೂರಿನ ಸಿಸ್ಕೋ ಸ್ವಯಂಸೇವಕರು ಜಾಗೃತಿ ಟ್ರಸ್ಟ್ ಜೊತೆಗೂಡಿ ಮಕ್ಕಳ ದಿನಾಚರಣೆ ಪ್ರಯುಕ್ತ ಕಡಗದಾಳು ಅಂಗನವಾಡಿಗೆ ಭೇಟಿ ನೀಡಿ ಮಕ್ಕಳಿಗೆ ಬಹುಮಾನವನ್ನು ವಿತರಣೆ ಮಾಡಿದರು. ಸಂಸ್ಥೆಯಿAದ ಅಮೃತ ಅಂಗನವಾಡಿ ಕಾರ್ಯಕರ್ತೆ ಅನಿಲ, ಸಹಾಯಕಿ ಹೇಮಾವತಿ ಹಾಜರಿದ್ದರು.ಕಡಂಗ: ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಶಾಲೆಯಲ್ಲಿ ಪರಮಪೂಜ್ಯ ಸದ್ಗುರು ಅಪ್ಪಯ್ಯ ಸ್ವಾಮಿಯವರ ಪುಣ್ಯಸ್ಮರಣೆ ಹಾಗೂ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಸದಸ್ಯರಾದ ಬಿ.ವಿ. ಅರುಣ್ಕುಮಾರ್ ವಹಿಸಿದ್ದರು ಕಾರ್ಯಕ್ರಮದಲ್ಲಿ ಆಡಳಿತ ಮಡಳಿ ಸದಸ್ಯರಾದ ಕೆ.ಎನ್. ಮಂಜುನಾಥ್ ಹಾಗೂ ಮುಖ್ಯ ಶಿಕ್ಷಕರು ಶಾಲಾ ಸಿಬ್ಬಂದಿ ವರ್ಗದವರು ಅಡುಗೆ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಶಿಕ್ಷಕಿಯಾದ ರೂಪಕಲ ಸರ್ವರನ್ನು ಸ್ವಾಗತಿಸಿದರು. ಹೇಮಮಾಲಿನಿ ಸರ್ವರನ್ನು ವಂದಿಸಿದರು ಹಾಗೂ ಶಿಕ್ಷಕರಾದ ಪ್ರತಾಪ್ ಎಸ್ ಕಾರ್ಯಕ್ರಮ ನಿರೂಪಣೆ ಮಾಡಿದರು.ವೀರಾಜಪೇಟೆ: ವೀರಾಜಪೇಟೆಯ ವಿನಾಯಕ ಇಂಗ್ಲೀಷ್ ಸ್ಕೂಲ್ನಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಆಡಳಿತ ಮಂಡಳಿಯ ಕಾರ್ಯದರ್ಶಿ ಜಯಕುಮಾರಿ ಅಧ್ಯಕ್ಷತೆಯಲ್ಲಿ ಶಾಲಾ ನಾಯಕ ಮತ್ತು ನಾಯಕಿಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ಮಕ್ಕಳ ದಿನಾಚರಣೆಯ ಮಹತ್ವವನ್ನು ಕುರಿತು ಶಿಕ್ಷಕಿ ಮೀನಾ ಮಾತನಾಡಿದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಮನ ರಂಜಿಸಿತು. ವಿದ್ಯಾರ್ಥಿಗಳಿಗೆ ಕ್ರೀಡೆಯನ್ನು ನಡೆಸಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರತಿಭಾ ಆಚಾರ್ಯ ಪ್ರಾರ್ಥಿಸಿ, ನಿರೂಪಣೆಯನ್ನು ಶೈಲಾ ರವರು ನೆರವೇರಿಸಿದರು,ನೆರೆದಿರುವ ಸರ್ವರನ್ನು ಶಿಕ್ಷಕಿ ಶ್ರೀಮತಿ ದಿವ್ಯಾ ಸ್ವಾಗತಿಸಿ, ಡಯನಾ ವಂದಿಸಿದರು. ಸೋಮವಾರಪೇಟೆ: ಸಮೀಪದ ಚೌಡ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.
೭ನೇ ತರಗತಿ ವಿದ್ಯಾರ್ಥಿ ಅಭಿಷೇಕ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಮುಖ್ಯ ಶಿಕ್ಷಕ ರಾಜಣ್ಣ, ಚೌಡ್ಲು ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಶೆಟ್ಟಿ ಸೇರಿದಂತೆ ಎಸ್.ಡಿ. ಎಂ.ಸಿ. ಅಧ್ಯಕ್ಷರು, ಪದಾಧಿಕಾರಿಗಳು, ಪೋಷಕರು ಉಪಸ್ಥಿತರಿದ್ದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಡಿಕೇರಿ : ಮಡಿಕೇರಿಯ ಹೊಸಬಡಾವಣೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿ ಗೀತಾ ಗಿರೀಶ್, ಆರ್ಥಿಕ ಸಲಹೆಗಾರರಾದ ಶೋಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮಕ್ಕಳಿಂದ ಛದ್ಮವೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹೊಸಬಡಾವಣೆ ಅಂಗನವಾಡಿ ಶಿಕ್ಷಕಿ ಕಂಬೆಯAಡ ಮುತ್ತಮ್ಮ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.ಮಡಿಕೇರಿ : ಮಡಿಕೇರಿಯ ಹೊಸಬಡಾವಣೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿ ಗೀತಾ ಗಿರೀಶ್, ಆರ್ಥಿಕ ಸಲಹೆಗಾರರಾದ ಶೋಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮಕ್ಕಳಿಂದ ಛದ್ಮವೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹೊಸಬಡಾವಣೆ ಅಂಗನವಾಡಿ ಶಿಕ್ಷಕಿ ಕಂಬೆಯAಡ ಮುತ್ತಮ್ಮ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.ಮಡಿಕೇರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ನಗರದ ಪುಟಾಣಿನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಸನ್ನಕುಮಾರ್, ಮೇಲ್ವಿಚಾರಕಿ ಸವಿತ ಕೀರ್ತನ್ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಪ್ರಾನ್ಸಿ ಡ್ರೆಸ್, ನೃತ್ಯಗಳನ್ನು ನೋಡಿ ಪ್ರೋತ್ಸಾಹಿಸಿ ಬಹುಮಾನ ವಿತರಿಸಿದರು.
ಉಪನಿರ್ದೇಶಕ ಪ್ರಸನ್ನಕುಮಾರ್ ಮಾತನಾಡಿ, ಭಾರತದ ಮೊದಲ ಪ್ರಧಾನಿ ಜವಾಹರ್ಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಪ್ರತಿವರ್ಷ ನವೆಂಬರ್ ೧೪ ರಂದು ಮಕ್ಕಳ ದಿನಾಚರಣೆ ಆಚರಿಸುತ್ತಿದ್ದು, ಮಕ್ಕಳ ಆರೈಕೆ, ಹಕ್ಕು ಶಿಕ್ಷಣದ ಕುರಿತು ಹೆಚ್ಚಿನ ಆಲೋಚನೆಯನ್ನು ಮಾಡುವುದರೊಂದಿಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೋಷಕರು, ಶಿಕ್ಷಕರೊಂದಿಗೆ ಸಮುದಾಯದ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಧನ್ಯ ಹರೀಶ್, ಸದಸ್ಯರುಗಳಾದ ಚಾರ್ಲಿ, ರಮೇಶ್ ಟಿ.ಪಿ., ಬಡೇಸಾಬ್, ನಿವೃತ್ತ ಮುಖ್ಯೋಪಾಧ್ಯಾಯಿನಿ ಪೊನ್ನಮ್ಮ, ರಜನಿ ಬಸವರಾಜು, ಮುಬೀನ, ಅಂಗನವಾಡಿ ಕಾರ್ಯಕರ್ತೆ ಉಮಾವತಿ, ಸಹಾಯಕಿ ದೈವಾಣಿ ಹಾಜರಿದ್ದರು.