ಕೂಡಿಗೆ, ನ. ೧೭: ಕೂಡಿಗೆಯ ಶ್ರೀ ಸತ್ಯನಾರಾಯಣ ವೃತಾಚರಣ ಸಮಿತಿ ವತಿಯಿಂದ ಲಕ್ಷ ದೀಪೋತ್ಸವದ ಅಂಗವಾಗಿ ತಾ.೧೯ ರಂದು ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಆವರಣದಲ್ಲಿ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆಯಿಂದ ವಿಶೇಷ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ ೭ ಗಂಟೆಗೆ ಲಕ್ಷ ದೀಪೋತ್ಸವವು ನಡೆಯಲಿದೆ. ಕಾರ್ಯಕ್ರಮ ಅಂಗವಾಗಿ ಮಹಿಳೆಯರಿಗೆ ಬಣ್ಣದ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಗುರು ತಿಳಿಸಿದ್ದಾರೆ.