ಮಡಿಕೇರಿ, ನ. ೧೭: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಪೊನ್ನಣ್ಣ ವಿರುದ್ದ ಅವಾಚ್ಯ ಪದ ಬಳಕೆ ಮಾಡಿ ಅವಹೇಳನಕಾರಿ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಮತ್ತೋರ್ವ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಜಿಲ್ಲೆಯ ಜಗನ್ನಾಥ್ ರೈ ಬಂಧಿತ ಆರೋಪಿ. ಈ ಹಿಂದೆ ಬಿಎಸ್‌ಎನ್‌ಎಲ್‌ನಲ್ಲಿ ಉದ್ಯೋಗಿಯಾಗಿ ಈಗ ನಿವೃತ್ತಿ ಹೊಂದಿದ್ದ ಆರೋಪಿ ಜಗನ್ನಾಥ್ ರೈಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಶಾಸಕರ ಮಾಧ್ಯಮ ಸಹಾಯಕ ಪೆಮ್ಮಂಡ ವಿನಿಲ್ ಸೋಮಣ್ಣ ಅವರುಗಳು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.