ನಾಪೋಕ್ಲು, ನ. ೧೭: ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ನೆರವಂಡ ಸೋಮಣ್ಣ ಬೊಳ್ಳವ್ವ ಜ್ಞಾಪಕಾರ್ಥ ಆಯೋಜಿಸಿದ್ದ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ಚೌರಿರ ಡಾ.ಜಗತ್ ತ್ತಿಮ್ಮಯ್ಯ ವಹಿಸಿದ್ದರು.
ರಸಪ್ರಶ್ನೆ ಕಾರ್ಯಕ್ರಮಕ್ಕೆ ಜಿಲ್ಲೆಯ ೧೪ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ಆರು ತಂಡಗಳು ಅಂತಿಮವಾಗಿ ಆಯ್ಕೆಯಾದರು. ಪ್ರಥಮ ಬಹುಮಾನವನ್ನು ಕಳತ್ಮಾಡು ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು, ದ್ವಿತೀಯ ಬಹುಮಾನವನ್ನು ನಾಪೋಕ್ಲುವಿನ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು , ತೃತೀಯ ಬಹುಮಾನವನ್ನು ನಾಪೋಕ್ಲುವಿನ ಎಕ್ಸೆಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪಡೆದುಕೊಂಡರು.
ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಸಾಯನ ಶಾಸ್ತç ವಿಭಾಗದ ಉಪನ್ಯಾಸಕ ಪಿ.ಕೆ ರವಿಶಂಕರ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ಬಹುಮಾನ ಪ್ರಾಯೋಜಕರು ಕುಂಬಳದಾಳು ಗ್ರಾಮಸ್ಥರಾದ ನೆರವಂಡ ಮುತ್ತಪ್ಪ, ಮೂರ್ನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ವೇಣು ಅಪ್ಪಣ್ಣ ಹಾಗೂ ಮೂರ್ನಾಡು ವಿದ್ಯಾ ಸಂಸ್ಥೆಯ ಖಜಾಂಚಿಗಳಾದ ಯತೀಶ್ ವಿ.ಎ. ನಿರ್ದೇಶಕರಾದ ಪುದಿಯೊಕ್ಕಡ ಹರೀಶ್ ದೇವಯ್ಯ ಉಪಸ್ಥಿತರಿದ್ದರು.