ಮಡಿಕೇರಿ, ನ.೧೭: ವಿದ್ಯಾರ್ಥಿಗಳು ಪ್ರತಿಭೆಯನ್ನು ಸರಿಯಾದ ಸಮಯಕ್ಕೆ ಬಳಸಿಕೊಳ್ಳುವುದು ಒಂದು ಆಶಯವಾಗಿದೆ ಎಂದು ವೈದ್ಯಕೀಯ ಸಮುದಾಯ ಸಂಸ್ಥೆಯ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ರಾಮಚಂದ್ರ ಕಾಮತ್ ಅವರು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ವತಿಯಿಂದ ಕಾಲೇಜು ಆವರಣದಲ್ಲಿ ಶುಕ್ರವಾರ ನಡೆದ ಸಾಂಸ್ಕೃತಿಕ, ಕ್ರೀಡಾ ಮತ್ತು ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಿ ಎಂದು ಹಾರೈಸಿದರು ಹಾಗೂ ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಳ್ಳುವುದು ಮುಖ್ಯ ಎಂದು ಹೇಳಿದರು.

ಮಾದಾಪುರ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಸಿ. ಜಿ ಮಂದಪ್ಪ, ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವ್ಯಕ್ತಿತ್ವದ ವಿಕಾಸವನ್ನು ಬೆಳೆಸಿಕೊಳ್ಳುವುದು ಮಹತ್ವವಾಗಿದೆ. ಬಡತನ ಎಂಬುದು ಶಿಕ್ಷಣಕ್ಕೆ ಎಂದಿಗೂ ಅಡ್ಡಿಯಾಗಬಾರದು ಹಾಗೂ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ ದೇಶಕ್ಕೆ ಕೊಡುಗೆ ನೀಡಿ ಎಂದು ಹೇಳಿದರು.

೨೦೨೫ ನೇ ಸಾಲಿನ ಗೌರಮ್ಮ ದತ್ತಿನಿಧಿ ಪ್ರಶಸ್ತಿ ವಿಜೇತರು ಸಾಹಿತಿಗಳಾದ ಕೂಡಕಂಡಿ ಓಂಶ್ರೀ ದಯಾನಂದ ಅವರು ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ತನ್ನದೇ ಆದ ಪ್ರತಿಭೆ ಎಂಬುದು ಅಡಗಿದೆ. ಆ ಪ್ರತಿಭೆಯನ್ನು ಹೊರಹಾಕಲು ಒಳ್ಳೆಯ ಶಿಕ್ಷಣ, ಒಳ್ಳೆಯ ವಿದ್ಯೆ ಅತಿ ಮುಖ್ಯ ಎಂದರು.

ಕಲಿಕೆ ಎಂಬುದು ನಿರಂತರವಾದ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲಿ ಕಲಿಕೆಯ ಒಂದು ಅಧ್ಯಯನದಲ್ಲಿ ತೊಡಗಿಸಿಕೊಂಡಿರಬೇಕು ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ ಗೌರವ ಎಂಬುದು ಅತಿ ಮುಖ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಶೈಕ್ಷಣಿಕ ಜ್ಞಾನ, ಕ್ರಿಯಾಶೀಲತೆ, ಸೃಜನಶೀಲತೆ ಬೆಳೆಸಿಕೊಳ್ಳಬೇಕು ಎಂದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲರಾದ ಎಚ್.ಪಿ.ನಿರ್ಮಲ ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಉತ್ತಮ ಮನೋಭಾವನೆ ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪತ್ರಾಂಕಿತ ವ್ಯವಸ್ಥಾಪಕರಾದ ಕೆ.ಪಿ. ರವಿಕಿರಣ್, ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಉದಯ ಕುಮಾರ, ಯುಯು ಸಿ .ಎಂ .ಎಸ್ ಕೆ.ಎಂ ಮುದ್ದಪ್ಪ, ಎನ್ ಎಸ್.ಎಸ್ ಘಟಕ ಸಂಚಾಲಕರಾದ ಹೆಚ್.ಎಸ್ ಡಾ. ವೇಣುಗೋಪಾಲ್, ಐ.ಕ್ಯೂ.ಎ.ಸಿ ಕ್ರೀಡಾ ಮತ್ತು ರೇಂಜರ್ ಅಧಿಕಾರಿ ಸಂಚಾಲಕರಾದ ರಾಖಿ ಪೂವಣ್ಣ, ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ವರ್ಗದವರು ಇತರರು ಇದ್ದರು.