ಮಡಿಕೇರಿ, ನ.೧೮: ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಾಜಾಸೀಟಿನಲ್ಲಿ ಮೂಲ ಸೌಲಭ್ಯ ಕಲ್ಪಿಸುವುದು ಮತ್ತಿತರ ಸಂಬAಧ ಕ್ರಮವಹಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ ಮಾಹಿತಿ ನೀಡಿದರು. ರಾಜಾಸೀಟಿನಲ್ಲಿ ಫಲಪುಷ್ಪ ಪ್ರದರ್ಶನವನ್ನು ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲಾಗುವುದು ಎಂದು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ರಾಜಾಸೀಟಿನಲ್ಲಿ ಜಿಪ್‌ಲೈನ್ ನಿರ್ವಹಣೆಯನ್ನು ಕನ್ನಡ ಭಾಷೆ ಬರದಿರುವವರು ನಡೆಸುತ್ತಿದ್ದು, ಈ ಬಗ್ಗೆ ದೂರುಗಳು ಬರುತ್ತಿವೆ. ಜನರ ಜೊತೆ ಸಂವಾದ ನಡೆಸುವವರನ್ನು ನಿಯೋಜಿಸುವಂತೆ ಸಲಹೆ ಮಾಡಿದರು.
ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಮಾತನಾಡಿ ರಾಜಾಸೀಟಿನಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಅಂದಾಜು ಪಟ್ಟಿ ತಯಾರಿಸಲಾಗಿದೆ ಎಂದು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ನಿತಿನ್ ಚಕ್ಕಿ, ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಣೀಂದ್ರ, ಸಹಾಯಕ ನಿರ್ದೇಶಕರಾದ ಮುತ್ತಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.