ಸೋಮವಾರಪೇಟೆ, ನ. ೧೮: ತಾಲೂಕಿನ ಗ್ರಾಮ ಪಂಚಾಯಿತಿ ಗಳು ಸೇರಿದಂತೆ ವಿವಿಧ ಇಲಾಖೆಗಳಿಗೆ ಒಳಪಟ್ಟಂತೆ ಮುಂದಿನ ಒಂದು ವರ್ಷಕ್ಕೆ ಬೇಕಾ ಗುವ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯಲ್ಲಿ ರೂ. ೨೫೬.೮೬ ಕೋಟಿ ಅನುದಾನಕ್ಕೆ ಕ್ರಿಯಾಯೋಜನೆ ತಯಾರಿಸಿದ್ದು, ಇದೇ ಪ್ರಥಮ ಬಾರಿಗೆ ನಡೆದ ತಾಲೂಕು ಮಟ್ಟದ ಯೋಜನೆ ಹಾಗೂ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.
ಶಾಸಕ ಡಾ. ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಯೋಜನೆ ಹಾಗೂ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಕ್ರಿಯಾಯೋಜನೆಯನ್ನು ಮಂಡಿಸಿ ಅನುಮೋದಿಸಲಾಯಿತು. ತಾಲೂಕಿನಲ್ಲಿ ನಡೆಯಬೇಕಿರುವ ಅಭಿವೃದ್ಧಿ ಕಾರ್ಯಗಳು, ನೂತನ ಯೋಜನೆಗಳ ಅನುಷ್ಠಾನ ಸಂಬAಧ ಯೋಜನೆ ಸಿದ್ದವಾಗಿದೆ. ಈ ಕ್ರಿಯಾಯೋಜನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಸಭೆಯಲ್ಲಿ ಮಂಡಿಸಿ, ಅನುಮೋದನೆಯ ನಂತರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.
ಪಂಚಾಯತ್‌ರಾಜ್ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯಿತಿಗಳು ಹೆಚ್ಚು ಬಲಿಷ್ಠವಾಗಿರಬೇಕು. ಸ್ಥಳೀಯ ಸರ್ಕಾರವಾಗಿ ಜನತೆಗೆ ಲಭ್ಯವಾಗುವ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿಗೆ ಪೂರಕವಾಗಿ ಕ್ರಿಯಾಯೋಜನೆ ತಯಾರಿಸಬೇಕು. ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಕನಿಷ್ಟ ೧ ರಿಂದ ೨ ಕೋಟಿಯಷ್ಟು ವಾರ್ಷಿಕ ಪ್ರಗತಿ ಸಾಧಿಸಬೇಕು. ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಸಭೆ ಹೆಚ್ಚು ಮಹತ್ವ ಪಡೆದಿದ್ದು, ಸದಸ್ಯರುಗಳು ತಮ್ಮ ಅಧಿಕಾರ ಅರಿತು ಕೆಲಸ ಮಾಡಬೇಕೆಂದು ಶಾಸಕರು ಸೂಚಿಸಿದರು.
ಗ್ರಾ.ಪಂ. ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿಯ ಮೂಲಕ ಸಣ್ಣಪುಟ್ಟ ರಸ್ತೆ, ಚರಂಡಿ, ಕೆರೆಗಳ ಹೂಳೆತ್ತುವ ಕಾಮಗಾರಿಯನ್ನು ಕೈಗೊಳ್ಳಬೇಕು. ಪಂಚಾಯಿತಿಗೆ ಆದಾಯ ಬರುವ ರೀತಿಯಲ್ಲಿ ಯೋಜನೆ ಸಿದ್ಧಪಡಿಸಬೇಕು. ವಾಣಿಜ್ಯ ಉದ್ದೇಶದ ಕಟ್ಟಡಗಳ ನಿರ್ಮಾಣಕ್ಕೆ ಮುಂದಾಗಬೇಕು. ಜಾಬ್ ಕಾರ್ಡ್ ಮಾಡಿಸುವ ಬಗ್ಗೆ ಅಭಿಯಾನ ನಡೆಸಬೇಕೆಂದು ಶಾಸಕರು ಸಲಹೆ ನೀಡಿದರು. ಉದ್ಯೋಗ ಖಾತ್ರಿ ಯೋಜನೆಯ ನಿಯಮಗಳು ಕಠಿಣವಾಗಿದ್ದು, ಕಾಮಗಾರಿ ಕೈಗೊಳ್ಳಲು ಅಸಾಧ್ಯವಾಗಿದೆ. ಹೀಗಾಗಿ ನಿರೀಕ್ಷಿತ ಪ್ರಗತಿ ಸಾಧ್ಯವಾಗುತ್ತಿಲ್ಲ. ನಿಯಮಾವಳಿಯನ್ನು ಸರಳೀಕರಣ ಮಾಡಬೇಕೆಂದು ಸಭೆಯಲ್ಲಿದ್ದ ನಿಡ್ತ ಗ್ರಾ.ಪಂ. ಅಧ್ಯಕ್ಷ ಅಶೋಕ್, ಬ್ಯಾಡಗೊಟ್ಟ ಗ್ರಾ.ಪಂ. ಅಧ್ಯಕ್ಷೆ ಪಾವನ ಗಗನ್, ದುಂಡಳ್ಳಿ ಅಧ್ಯಕ್ಷೆ ಭವಾನಿ, ಗರ್ವಾಲೆ ಅಧ್ಯಕ್ಷೆ ನೇತ್ರಾ, ದೊಡ್ಡಮಳ್ತೆ ಅಧ್ಯಕ್ಷ ಗೋಪಾಲಕೃಷ್ಣ, ಬೆಟ್ಟದಳ್ಳಿ ಅಧ್ಯಕ್ಷ ತಮ್ಮಯ್ಯ ಗಮನ ಸೆಳೆದರು.
ಇದರೊಂದಿಗೆ ಸೂಕ್ತ ಸಮಯದಲ್ಲಿ ಅನುದಾನ ಬರುತ್ತಿಲ್ಲ. ಮೆಟೀರಿಯಲ್ ಬಿಲ್‌ಗಳಿಗೆ ಹಣ ಸಿಗುತ್ತಿಲ್ಲ. ಅಧಿಕಾರಿಗಳು ಸ್ಥಳೀಯ ಆಡಳಿತದೊಂದಿಗೆ ಸ್ಪಂದಿಸುವ ಕೆಲಸ ಆಗಬೇಕಿದೆ ಎಂದರು.
ಆಡಳಿತಾತ್ಮಕ ಸಮಸ್ಯೆಗಳ ಬಗ್ಗೆ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ಶಾಸಕರು ಭರವಸೆ ನೀಡಿದರು. ದೊಡ್ಡಮಳ್ತೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿ ಪೂರ್ಣಗೊಂಡಿಲ್ಲ. ೨ ಬೋರ್‌ವೆಲ್‌ಗಳು ಸ್ಥಗಿತಗೊಂಡಿವೆ ಎಂದು ಗೋಪಾಲಕೃಷ್ಣ ಹೇಳಿದರು. ಬೆಟ್ಟದಳ್ಳಿ ಭಾಗದಲ್ಲಿ ಕೆಲವೆಡೆ ಪೈಪ್‌ಲೈನ್ ಅಳವಡಿಕೆಯಾಗಿದ್ದರೂ ಟ್ಯಾಂಕ್‌ಗಳ ನಿರ್ಮಾಣ ನಡೆದಿಲ್ಲ ಎಂದು ತಮ್ಮಯ್ಯ ದೂರಿದರು. ಕಾಮಗಾರಿ ಪೂರ್ಣಗೊಳ್ಳದೇ ಇಲಾಖೆಯಿಂದ ಗ್ರಾ.ಪಂ.ಗಳಿಗೆ ವಹಿಸಿಕೊಳ್ಳಬೇಡಿ ಎಂದು ಸಲಹೆ ನೀಡಿದ ಶಾಸಕರು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಅಭಿಯಂತರ ಟಿ.ಪಿ. ವೀರೇಂದ್ರ ಅವರಿಗೆ ಸೂಚಿಸಿದರು.
ಮಲ್ಲಳ್ಳಿ ಜಲಪಾತದ ಬಳಿ ಕೇಬಲ್ ಕಾರ್ ಅಳವಡಿಸುವ ಯೋಜನೆ ಪ್ರಗತಿಯಲ್ಲಿದ್ದು, ಪಿಲ್ಲರ್‌ಗಳ ನಿರ್ಮಾಣ ಸ್ಥಳವನ್ನು ಕಂದಾಯ ಇಲಾಖೆ ಗುರುತು ಮಾಡಬೇಕೆಂದು ತಹಶೀಲ್ದಾರ್ ಕೃಷ್ಣಮೂರ್ತಿ ಅವರಿಗೆ ಶಾಸಕರು ನಿರ್ದೇಶಿಸಿದರು.
ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ಕುಮಾರ್, ಆಡಳಿತಾಧಿಕಾರಿ ಅಬ್ದುಲ್ ನಭಿ, ತಹಶೀಲ್ದಾರ್ ಕೃಷ್ಣಮೂರ್ತಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಬಿ. ಸತೀಶ್, ಬಿಟಿಸಿಜಿ ಕಾಲೇಜು ಪ್ರಾಂಶುಪಾಲ ಹರ್ಷ ಸೇರಿದಂತೆ ಇತರರು ಇದ್ದರ