ಮಡಿಕೇರಿ, ನ. ೧೮: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ ೬ ಕೊನೆಯ ದಿನವಾಗಿದೆ.
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-೩-ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-೩ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಟ ೧೮ ವರ್ಷಗಳು ಹಾಗೂ ಗರಿಷ್ಠ ೫೫ ವರ್ಷಗಳನ್ನು ಮೀರಿರತಕ್ಕದ್ದಲ್ಲ.
ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸತಕ್ಕದ್ದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ. ೯೮ ಸಾವಿರ ಹಾಗೂ ನಗರ ಪ್ರದೇಶದಲ್ಲಿ ರೂ. ೧.೨೦ ಲಕ್ಷಗಳನ್ನು ಮೀರತಕ್ಕದ್ದಲ್ಲ. ಅಂಗವಿಕಲ ಮಹಿಳೆಯರಿಗೆ ಶೇ. ೫ ರಷ್ಟು ಮೀಸಲಿರಿಸತಕ್ಕದ್ದು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ. ೩೩ ರಷ್ಟು, ವಿಶೇಷಚೇತನರಿಗೆ ಶೇ. ೫ರಷ್ಟು ಹಾಗೂ ತೃತೀಯ ಲಿಂಗಿಗಳಿಗೆ ಶೇ. ೧ ರಷ್ಟು ಅಂಗವಿಕಲ ಮಹಿಳೆಯರಿಗೆ ಶೇ. ೨ ರಷ್ಟನ್ನು ಮೀಸಲಿರಿಸುವುದು. ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ ಹೆಚ್.ಐ.ವಿ. ಪೀಡಿತರಿಗೆ ೩೫ ವರ್ಷ ವಯೋಮಿತಿ ಮೀರಿರತಕ್ಕ ಅವಿವಾಹಿತ ಮಹಿಳೆಯರಿಗೆ ಶೇ. ೨ ರಷ್ಟನ್ನು ಮೀಸಲಿರಿಸುವುದು.
ಈ ಯೋಜನೆಗೆ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕವೇ ಸಲ್ಲಿಸಬೇಕಿದೆ. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್‌ಲೈನ್‌ನಲ್ಲಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಈ ಯೋಜನೆಯಲ್ಲಿ ಒಂದು ಸಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು. ನಿಗಮದ ಸಹಾಯವಾಣಿ: ೮೮೬೭೫೩೭೭೯೯/ ದೂ.ಸಂ: ೦೮೦-೨೯೯೦೩೯೯೪ (ಬೆಳಿಗ್ಗೆ: ೧೦ ರಿಂದ ಸಂಜೆ: ೫.೩೦ ರವರೆಗೆ ಸಂಪರ್ಕಿಸಬಹುದಾಗಿದೆ).
ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಹೆಚ್ಚಿನ ವಿವರಗಳನ್ನು hಣಣಠಿs://ಞmಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ತಿಳಿಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ
ಪ್ರಸಕ್ತ ೨೦೨೫-೨೬ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಕೃಷಿ ಹಾಗೂ ಕೃಷಿ ಸಂಬAಧಿತ ಚಟುವಟಿಕೆಗಳನ್ನು ಅನುಷ್ಠಾನಗೂಳಿಸುತ್ತಿರುವ ರೈತರಿಗೆ ವಿತರಿಸಲಾಗುವುದು. ಜಿಲ್ಲಾಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ಕೆಯಾದ ಜಿಲ್ಲೆಯ ೧೦ ರೈತರಿಗೆ ತಲಾ ರೂ. ೨೫,೦೦೦ ಹಾಗೂ ತಾಲೂಕು ಮಟ್ಟದ ಪ್ರಶಸ್ತಿಯನ್ನು ಆಯಾಯ ತಾಲ್ಲೂಕಿನ ೫ ರೈತರಿಗೆ ತಲಾ ರೂ. ೧೦,೦೦೦/- ಜಿಲ್ಲಾಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುವುದು,
ಪ್ರಶಸ್ತಿಗಾಗಿ ರೈತರು ಭಾಗವಹಿಸಬಹುದಾದ ಕೃಷಿ ಮತ್ತು ಕೃಷಿ ಸಂಬAಧಿತ ಚಟುವಟಿಕೆಗಳಾದ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವ್ಯೆಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಹಸಿರು ಮನೆ, ಕಸಿ ಅಭಿವೃದ್ಧಿ ಸಸ್ಯಕಾಶಿ ಇತ್ಯಾದಿ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಮತ್ತಿತರ ಸಾಕಾಣಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅರ್ಹ ಆಸಕ್ತ ರೈತರು ಅರ್ಜಿಗಳನ್ನು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ದಿನಾಂಕ ೨೯-೧೧-೨೦೨೫ರ ಸಂಜೆ ೫ ಗಂಟೆಯೊಳಗಾಗಿ ತಲುಪಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.