ಶ್ರೀಮಂಗಲ, ನ. ೧೮: ಪೊನ್ನಂಪೇಟೆ ತಾಲೂಕು ಟಿ. ಶೆಟ್ಟಿಗೇರಿಯ ಮಾಯಣಮಾಡ ಮಂದಯ್ಯ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪೋಷಕರ ಶಿಕ್ಷಕರ ಮಹಾಸಭೆಯ ಕಾರ್ಯಕ್ರಮದಲ್ಲಿ ಶಾಲಾ ವತಿಯಿಂದ ಕಳೆದ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಕನ್ನಡ ವಿಷಯದಲ್ಲಿ ೧೨೫ಕ್ಕೆ ೧೨೪ ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡ ಕನಕವಲ್ಲಿ ಎಸ್., ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ಆಟೋಟ ಸ್ಪರ್ಧೆಗಳಲ್ಲಿ ೨೦೦ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ದೀಪಿಕಾ ಹಾಗೂ ಜಾವಲಿನ್ ಎಸೆತದಲ್ಲಿ ತೃತೀಯ ಸ್ಥಾನ ಪಡೆದ ಸಿಂಧು ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಪೋಷಕರು, ಮುಖ್ಯ ಶಿಕ್ಷಕರು, ಸಹಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.