ಸೋಮವಾರಪೇಟೆ, ನ. ೧೯: ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷ ಜಿ.ಎಂ.ಕಾAತರಾಜ್ ಅಧ್ಯಕ್ಷತೆಯಲ್ಲಿ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ರಾಜ್ಯ ಸರಕಾರದಿಂದ ಅಕ್ಕ ಪಡೆ ಹಾಗೂ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಾಲ ನೀಡುವ ಉದ್ದೇಶದಿಂದ ಗೃಹಲಕ್ಷ್ಮೀ ವಿವಿಧೋದ್ದೇಶ ಸಂಘ ಜಾರಿಗೆ ತರಲಾಗುತ್ತಿದ್ದು ಇದರ ಉದ್ಘಾಟನೆ ತಾ. ೧೯ ರಂದು ರಾಜ್ಯದ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ತಾಲೂಕಿನಲ್ಲಿ ಎಲ್ಲಾ ತಯಾರಿ ನಡೆದಿದೆ ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ಶ್ರೀದೇವಿ ಮುಧೋಳ್ ಸಭೆಗೆ ತಿಳಿಸಿದರು.
ಆಹಾರ ನಿರೀಕ್ಷಕಿ ಯಶಸ್ವಿನಿ ಮಾತನಾಡಿ, ತಾಲೂಕಿನಲ್ಲಿ ೧೦೩೨ ಅನರ್ಹ ಬಿಪಿಎಲ್ ಕಾರ್ಡ್ಗಳಿದ್ದು, ನಾಲ್ಕು ಚಕ್ರದ ವಾಹನ ಹೊಂದಿರುವವರು, ಜಿಎಸ್ಟಿ ಮತ್ತು ಐಟಿ ಪಾವತಿದಾರರು,೧.೨೦.೦೦೦ ಕ್ಕೂ ಅಧಿಕ ಹಣದ ಬ್ಯಾಂಕ್ ವ್ಯವಹಾರ ನಡೆಸುವವರ ಕಾರ್ಡ್ ರದ್ದಾಗಿದೆ ಎಂದರು.ಅರ್ಹ ಫಲಾನುಭವಿಗಳಿಗೆ ಮಾತ್ರ ಕಾರ್ಡ್ ನೀಡಿ,ಅನರ್ಹರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಪಡಿತರ ಚೀಟಿಯ ಬಗ್ಗೆ ಖುದ್ದು ಪರಿಶೀಲಿಸಿ ವರದಿ ನೀಡಬೇಕೆಂದು ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಂದ ಸೂಚನೆ ಇದೆ ಎಂದು ಸಭೆಗೆ ತಿಳಿಸಿದರು.
ಗೃಹಲಕ್ಷ್ಮೀ ಯೋಜನೆಯಡಿ ಅನುದಾನ ಬಿಡುಗಡೆಯಾಗಿದ್ದರೂ ಫಲಾನುಭವಿಗಳಿಗೆ ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಹಣ ಖಾತೆಗೆ ಜಮೆಯಾಗಿಲ್ಲ ಎಂದು ಸಮಿತಿ ಸದಸ್ಯರಾದ ಎಸ್.ಎಂ.ಡಿಸಿಲ್ವಾ ಸಭೆಗೆ ತಿಳಿಸಿದರು.
ಸೆಸ್ಕ್ ಇಲಾಖೆಯಿಂದ ಅಳವಡಿಸುತ್ತಿರುವ ಕಂಬಗಳು ಕಳಪೆ ಗುಣಮಟ್ಟದಿಂದ ಕೂಡಿದೆ. ಇದನ್ನು ವಾಪಾಸು ಕಳುಹಿಸದಿದ್ದರೆ ಮಾರ್ಗದಾಳುಗಳು ತಮ್ಮ ಕೈಕಾಲುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಸಮಿತಿ ಸದಸ್ಯೆ ಶೀಲಾ ಡಿಸೋಜ ಅವರು ಸಹಾಯಕ ಕಾರ್ಯಪಾಲಕ ಅಭಿಯಂತರ ವಿನಯ್ ಅವರಿಗೆ ತಿಳಿಸಿದರು.
ಯುವನಿಧಿ ಯೋಜನೆ ಮತ್ತು ಶಕ್ತಿ ಯೋಜನೆಗೆ ಸಂಬAಧಿಸಿದ ಅಧಿಕಾರಿಗಳು ಸಭೆಗೆ ಗೈರು ಹಾಜರಾಗಿದ್ದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಮಾತನಾಡಿ, ತಾಲೂಕು ಮಟ್ಟದಲ್ಲಿ ಯಾವುದೇ ಸಮಸ್ಯೆಗಳು ಪರಿಹಾರ ಕಾಣದಿದ್ದರೆ ನೇರವಾಗಿ ಗಮನಕ್ಕೆ ತನ್ನಿ, ಸ್ಥಳಕ್ಕೆ ಖುದ್ದು ಭೇಟಿ ನೀಡುತ್ತೇನೆ ಎಂದು ಸಭೆಗೆ ತಿಳಿಸಿದರು.
ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಜಿ.ಎಂ. ಕಾಂತರಾಜ್ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಇಲಾಖೆಗಳು ಸಮರ್ಪಕವಾಗಿ ಕೆಲಸ ಮಾಡಬೇಕು. ಎಲ್ಲಾ ಫಲಾನುಭವಿಗಳಿಗೂ ಯೋಜನೆಯ ಸಂಪೂರ್ಣ ಪ್ರಯೋಜನ ದೊರಕುವಂತೆ ಇಲಾಖಾಧಿಕಾರಿಗಳು ಕೆಲಸ ಮಾಡಬೇಕಿದೆ ಎಂದು ಹೇಳಿದರು.