ಸೋಮವಾರಪೇಟೆ, ನ. ೧೯ : ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೇಕಟ್ಟೆ ರಸ್ತೆಯ ಎರಡನೇ ವಾರ್ಡಿನಲ್ಲಿ ೨೫ಕ್ಕೂ ಅಧಿಕ ಕುಟುಂಬಗಳು ವಾಸವಿರುವ ಮನೆಗಳು ಅಪಾಯದ ಅಂಚಿನಲ್ಲಿದ್ದು, ತಕ್ಷಣ ತಡೆಗೋಡೆ ನಿರ್ಮಾಣಕ್ಕೆ ಕ್ರಮ ವಹಿಸಬೇಕೆಂದು ಗ್ರಾಮಸ್ಥರು ಮಾಡಿದ ಮನವಿಗೆ ಸ್ಪಂದಿಸಿದ ಶಾಸಕ ಡಾ. ಮಂತರ್ ಗೌಡ ಅವರು ಸ್ಥಳ ಪರಿಶೀಲನೆ ನಡೆಸಿದರು.

ಮನೆಗಳ ಹಿಂಭಾಗ ಇರುವ ಬರೆ ಪ್ರತಿ ಮಳೆಗಾಲದಲ್ಲಿ ಜರೆಯಲಿದ್ದು, ಕೂಲಿ ಕಾರ್ಮಿಕ ಕುಟುಂಬಗಳು ನೆಲೆಸಿರುವ ಮನೆಯ ಗೋಡೆಗಳು ಬಿರುಕುಬಿಟ್ಟಿವೆ. ತಕ್ಷಣ ತಡೆಗೋಡೆ ನಿರ್ಮಾಣದ ಅಗತ್ಯವಿದೆ ಎಂದು ಗ್ರಾ.ಪಂ. ಸದಸ್ಯ ಸುರೇಶ್ ಶೆಟ್ಟಿ ಅವರು ಶಾಸಕರಿಗೆ ತಿಳಿಸಿದರು.