ನಾಪೋಕ್ಲು, ನ. ೧೯: ದೇವಾಲಯದ ಜೀರ್ಣೋದ್ಧಾರಕ್ಕಾಗಿ ನೆರವು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭರವಸೆ ನೀಡಿದರು.
ಇಲ್ಲಿಗೆ ಸಮೀಪದ ಕಕ್ಕುಂದ ಕಾಡು ಶ್ರೀ ಲಕ್ಷಿö್ಮ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಅವರು ದೇವಾಲಯದ ಜೀರ್ಣೋ ದ್ಧಾರ ಸಮಿತಿ ಪದಾಧಿಕಾರಿಗಳೊಂದಿಗೆ ಮಾತನಾಡಿ, ಗ್ರಾಮಸ್ಥರು ಒಗ್ಗೂಡಿ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಬೇಕು. ದೇವಾಲಯದ ಪುನರ್ ನಿರ್ಮಾಣಕ್ಕೆ ನೆರವು ನೀಡುತ್ತೇನೆ ಮಾತ್ರವಲ್ಲದೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ಅವರನ್ನು ಭೇಟಿ ಮಾಡಿ ಹೆಚ್ಚಿನ ಹಣ ಕ್ರೋಢೀಕರಣಕ್ಕೆ ಸಹಕಾರ ನೀಡಲಾಗುವುದು ಎಂದರು.
ಈ ಸಂದರ್ಭ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಸ ಎಚ್.ಎ, ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ್ ಬೇಬ, ಜೀರ್ಣೋದ್ಧಾರ ಆಡಳಿತ ಮಂಡಳಿ ಅಧ್ಯಕ್ಷ ಎಂ.ಪಿ ಗೋಪಾಲ, ಖಜಾಂಜಿ ಟಿ.ಕೆ. ಸೂರ್ಯ ಕುಮಾರ್, ಉಪ ಅಧ್ಯಕ್ಷ ಟಿ.ವಿ. ಭವಾನಿ, ಗೌರವ ಅಧ್ಯಕ್ಷ ಟಿ.ಎನ್. ರಮೇಶ್, ಕಾರ್ಯದರ್ಶಿ ಟಿ.ಎಂ. ವಸಂತಕುಮಾರ್, ಕುಮಾರ ಸಿ, ದೇವಾಲಯದ ಮುಖ್ಯ ಅರ್ಚಕ ಸುಧೀರ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.