ಗೋಣಿಕೊಪ್ಪಲು, ನ. ೧೯ : ಮಹಿಳೆಯರ ಆರ್ಥಿಕ ಸಾಮಾಜಿಕ ಬೆಳವಣಿಗೆಗೆ ಪೂರಕವಾಗಿ ಸರ್ಕಾರ ಶೇ.೫೦ ಭಾಗ ಮಹಿಳೆಯರಿಗೆ ಮೀಸಲಿಟ್ಟಿರುವುದರಿಂದ ಇವುಗಳ ಸದ್ಭಳಕೆಯನ್ನು ಮಹಿಳೆಯರು ಮಾಡಿಕೊಳ್ಳಬೇಕು ಎಂದು ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಕರೆ ನೀಡಿದರು.
ಗೋಣಿಕೊಪ್ಪಲುವಿನ ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಹಿಳಾ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯರ ಮಾತನ್ನು ಗೌರವಿಸಬೇಕು. ಸಣ್ಣ ವಯಸ್ಸಿನಲ್ಲಿಯೇ ಯುವತಿಯರು ಠಾಣೆ ಹಾಗೂ ನ್ಯಾಯಾಲಯ ಮೆಟ್ಟಿಲು ಏರುವ ಪರಿಸ್ಥಿತಿ ಕಣ್ಣ ಮುಂದೆ ಕಾಣುತ್ತಿದ್ದೇವೆ. ಈ ಬಗ್ಗೆ ಮನೆಯಲ್ಲಿರುವ ಪೋಷಕರು ತಮ್ಮ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಮುಖರಾದ ಬಾನಂಗಡ ಅರುಣ್ ಮಾತನಾಡಿ, ಮಹಿಳೆಯರಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಅನೇಕ ಯೋಜನೆಗಳು ಜಾರಿಗೆ ತರುವÀ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ. ಕೆಲವು ಮಂದಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಕಂಡು ಬಂದಿದೆ. ಮಹಿಳೆಯರು ಲಭ್ಯವಿರುವ ಸವಲತ್ತುಗಳನ್ನು ಸದ್ಭ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜದಲ್ಲಿ ಆರ್ಥಿಕವಾಗಿ ಬಲಿಷ್ಠರಾಗುವಂತೆ ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗೋಣಿಕೊಪ್ಪ ಗ್ರಾ.ಪಂ. ಸದಸ್ಯೆ ಮನ್ನಕ್ಕಮನೆ ಸೌಮ್ಯಬಾಲು ಮಾತನಾಡಿ ಸಮಾಜದಲ್ಲಿ ಮಹಿಳೆಯರಿಗೆ ಅಪಾರವಾದ ಗೌರವ ಇರುವುದರಿಂದ ಇದನ್ನು ಕಾಪಾಡಿಕೊಂಡು ಮುಂದೆ ಸಾಗಬೇಕು ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಯೋಜನಾಧಿಕಾರಿ ಪಿ.ಹರೀಶ್ ಪ್ರಾಸ್ತವಿಕವಾಗಿ ಮಾತನಾಡಿ, ಮಹಿಳೆಯರ ಅಭಿವೃದ್ಧಿಗಾಗಿ ಸಾಕಷ್ಟು ರೀತಿಯಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಲಕ್ಷಾಂತರ ಮಹಿಳೆಯರು ಯೋಜನೆಯ ಪ್ರಯೋಜನ ಪಡೆಯುವ ಮೂಲಕ ಸ್ವಾವಲಂಬಿ ಬದುಕನ್ನು ಕಂಡುಕೊAಡಿದ್ದಾರೆ ಎಂದು ತಿಳಿಸಿದರು.
ಪ್ರಕೃತಿ ಚಿಕಿತ್ಸೆಯ ಬಗ್ಗೆ ಡಾ.ಅನನ್ಯ, ಕಾನೂನಿನ ಅರಿವಿನ ಬಗ್ಗೆ ಗೋಣಿಕೊಪ್ಪ ಪೊಲೀಸ್ ಅಧಿಕಾರಿ ಕಾವೇರಮ್ಮ, ಆರೋಗ್ಯದ ಬಗ್ಗೆ ಗೋಣಿಕೊಪ್ಪ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಗ್ರೀಷ್ಮಾ ಬೋಜಮ್ಮ, ಸಂಪನ್ಮೂಲ ವ್ಯಕ್ತಿಗಳಾದ ಚಂದನ ಮಂಜುನಾಥ್ ವಿಷಯ ಮಂಡನೆ ಮಾಡಿದರು. ವಿನು ಕಾರ್ಯಕ್ರಮದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಪುಷ್ಪಗುಚ್ಚ ಸ್ಪರ್ಧೆ, ಕರಕುಶಲ ಉತ್ಪನ್ನಗಳ ಪ್ರದರ್ಶನ, ಪೌಷ್ಟಿಕ ಆಹಾರ ಪ್ರಾತ್ಯಾಕ್ಷಿಕೆ, ಸಾಂಸ್ಕೃತಿಕ ವೈಭವ ಹಮ್ಮಿಕೊಳ್ಳಲಾಗಿತ್ತು. ವಿವಿಧ ಭಾಗದಿಂದ ೨೬ ಮಹಿಳಾ ತಂಡಗಳು ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು. ಕ್ಷೇತ್ರ ಯೋಜನಾಧಿಕಾರಿಗಳು, ಜ್ಞಾನವಿಕಾಸ ಸಮನ್ವಯಾಧಿಕಾರಿಗಳು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು ಸೇವಾ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಜೆವಿಕೆ ಸಮನ್ವಯಾಧಿಕಾರಿಗಳಾದ ಸಿ.ಉಷಾರಾಣಿ ಸ್ವಾಗತಿಸಿ, ಮೇಲ್ವಿಚಾರಕರಾದ ಹೆಚ್.ಆರ್. ನಾಗರಾಜ್ ನಿರೂಪಿಸಿ, ವಿನು ಪ್ರಾರ್ಥಿಸಿ, ಮೇಲ್ವೀಚಾರಕರಾದ ಸುಜಿರ್ ಕುಲಾಲ್ ವಂದಿಸಿದರು.