ಕೂಡಿಗೆ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಹಾಗೂ ಅನಾಹತ ಯುನೈಟೆಡ್ ಎಫರ್ಟ್ ಫೌಂಡೇಶನ್ ಇವರ ಸಹ ಯೋಗದೊಂದಿಗೆ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಂದು ದಿನದ ವೃತ್ತಿ ಯೋಜನೆಯ ಶಿಕ್ಷಕರಿಗೆ ತರಬೇತಿಯನ್ನು ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸಮನ್ವಯ ಅಧಿಕಾರಿ, ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಭಾರತಿ ವೃತ್ತಿ ಯೋಜನೆ ಕಾರ್ಯಕ್ರಮ ಹಿಂದಿನ ವರ್ಷದಿಂದಲೂ ನಡೆಯುತ್ತಿದ್ದು, ಇದರ ಉಪಯೋಗ ಮಕ್ಕಳಿಗೆ ತಲುಪುತ್ತಿದೆ ಎಂದರು.

ತರಬೇತುದಾರರಾದ ಸಿದ್ದೇಶ್, ವಿಭಾಗೀಯ ಮುಖ್ಯಸ್ಥ ಪ್ರಸನ್ನ ಕುಮಾರ್ ಡಿ.ಕೆ. ಮಾತನಾಡಿ, ಉದ್ಯೋಗ ಹಾಗೂ ಅದಕ್ಕೆ ಬೇಕಾದ ಕೌಶಲ್ಯಗಳ ನಡುವೆ ಉಂಟಾದ ಬಿರುಕನ್ನು ಹೋಗಲಾಡಿಸಲು ಹಾಗೂ ವಿದ್ಯಾರ್ಥಿಗಳು ಯೋಜಿತ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ತಮ್ಮ ಕೆಲಸದಲ್ಲಿ ತೃಪ್ತಿ ಮತ್ತು ಸಂತೋಷವನ್ನು ಪಡುವುದರ ಜೊತೆಗೆ ದೇಶದ ಆರ್ಥಿಕತೆಗೆ ಕೊಡುಗೆ ಸಲ್ಲಿಸಲು ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಮಾರ್ಗಸೂಚಿಯಾಗಿದೆ ಎಂದರು.

ಅನಾಹತ ಯುನೈಟೆಡ್ ಸಂಸ್ಥೆಯ ತರಬೇತುದಾರ ಸಿದ್ದೇಶ್ ಎಸ್. ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರಾದ ಅಮೃತ ಕೆ.ವಿ., ದಿನೇಶ್ ಆಚಾರ್ ಹಾಗೂ ಈ ಸಂದರ್ಭದಲ್ಲಿ ಜಿಲ್ಲೆಯ ೭ ವಸತಿ ಶಾಲೆಗಳಿಂದ ೧೪ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ವೃತ್ತಿ ಯೋಜನಾ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.ಸುಂಟಿಕೊಪ್ಪ: ವಿದ್ಯಾರ್ಥಿಗಳು ವ್ಯಾಸಂಗದ ಅವಧಿಯಲ್ಲಿ ಏಕಾಗ್ರತೆಯಿಂದ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು, ನಾಳಿನ ದೇಶದ ಉತ್ತಮ ನಾಗರಿಕರಾಗಲು ವಿದ್ಯಾಥಿಗಳಿಗೆ ಜ್ಞಾನದ ಜೊತೆಯಲ್ಲಿ ಸಂಸ್ಕಾರವನ್ನು ಮೈಗೂಡಿಸಬೇಕು ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ ಹೇಳಿದರು.

ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಮತ್ತು ಉಪನ್ಯಾಸಕರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ತಮ್ಮ ತಮ್ಮ ಮನೆಗಳಲ್ಲಿ ಸೂಕ್ತ ಕಲಿಕಾ ವಾತಾವರಣವನ್ನು ಸೃಷ್ಟಿಸಬೇಕು. ಕಾಲೇಜಿಗೆ ವಿದ್ಯಾರ್ಥಿಗಳು ಗೈರುಹಾಜರಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಸಮಾರಂಭವನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಉದ್ಘಾಟಿಸಿ ಮಾತನಾಡಿದ ಅವರು ಜೀವನದಲ್ಲಿ ಬರುವ ಎಲ್ಲಾ ಸಮಸ್ಯೆಗಳಿಗೂ ರಾಮಬಾಣ ಶಿಕ್ಷಣ. ವಿದ್ಯಾರ್ಥಿಗಳು ಶಿಸ್ತು ಬದ್ಧತೆಯಿಂದ ಕಲಿಕೆಯ ಪ್ರಕ್ರಿಯೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ವ್ಯಾಸಂಗದ ಅವಧಿಯಲ್ಲಿ ಸಾವಿರ ಸವಾಲುಗಳು ಎದುರಾದರೂ, ಎದೆಗುಂದದೆ ಸಾಧಿಸುವ ಛಲದೊಂದಿಗೆ ಮುನ್ನಡೆಯಬೇಕು. ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಮುಂದಿನ ದಿನಗಳಲ್ಲಿ ಅಧ್ಯಯನ ವಿಷಯಗಳನ್ನು ಆಲಿಸಿಕೊಂಡು ಅಧ್ಯಯನ ಶೀಲರಾಗಬೇಕೆಂದರು.

ಕಾಲೇಜಿನ ಜೀವಶಾಸ್ತç ಉಪನ್ಯಾಸಕರಾದ ಪದ್ಮಾವತಿ ಮಕ್ಕಳ ಕಲಿಕಾ ಪ್ರಗತಿಯ ಬಗ್ಗೆ ಮಾತನಾಡಿ, ಮಗುವಿಗೆ ತಾಯಿ ಮೊದಲ ಗುರುವಾಗಬೇಕು, ಮನೆಯು ಮಾದಲ ಪಾಠ ಶಾಲೆಯಾಗಬೇಕು ಎಂದರು.

ಶ್ರಮವಹಿಸಿ ದುಡಿಯುವ ಕಲೆಯನ್ನು ಪೋಷಕರು ತಮ್ಮ ಮನೆಯ ವಾತಾವರಣದಿಂದಲೇ ಕಲಿಸಿಕೊಡಬೇಕೆಂದರು. ಕೃತಿಕಾ ಪ್ರಾರ್ಥಿಸಿ, ಉಪನ್ಯಾಸಕಿ ಸುನಿತಾ ಗಿರೀಶ್ ಸ್ವಾಗತಿಸಿ, ಉಪನ್ಯಾಸಕ ಈಶಾ ನಿರೂಪಿಸಿ, ಕವಿತಾ ವಂದಿಸಿದರು. ಪೊನ್ನಂಪೇಟೆ: ಪೊನ್ನಂಪೇಟೆ ತಾಲೂಕು ಬಲ್ಯಮಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕ - ಶಿಕ್ಷಕರ ಸಭೆ ನಡೆಯಿತು.

ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮಲ್ಲಿಗೆ ವಹಿಸಿ, ಸರಕಾರದ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಉಪಾಧ್ಯಕ್ಷೆ ಸರೋಜ, ಮುಖ್ಯ ಶಿಕ್ಷಕಿ ಕೆ.ಪಿ. ಪವಿತ್ರ ಮಾತನಾಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸುಶೀಲಾ, ಕರವಸೂಲಿದಾರರಾದ ಲತಾ, ಆಶಾಕಾರ್ಯಕರ್ತೆ ಕಾಂಚನ, ಆರೋಗ್ಯ ಕಾರ್ಯಕರ್ತೆ ರಾಧಾ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಡೀನ, ಪದ್ಮ, ನಾಗಿಣಿ, ಅಂಗನವಾಡಿ ಕಾರ್ಯಕರ್ತೆ ಸೌಮ್ಯ, ಸಹಾಯಕರು ವರ್ಷಿಣಿ, ಅಂಚೆ ಇಲಾಖೆ, ಗ್ರಾಮಸ್ಥರಾದ ಡಿಕ್ಕಿ ನಾಣಯ್ಯ ಹಾಜರಿದ್ದರು.

ಶಾಲೆಯ ವಿದ್ಯಾರ್ಥಿ ಸಂಘದ ಸದಸ್ಯ ಕೊಟ್ಟಂಗಡ ಪ್ರಕಾಶ್ ಬೆಳ್ಳಿಯಪ್ಪ ಬಹುಮಾನ ವಿತರಿಸಿದರು. ಜಯಲಕ್ಷಿö್ಮ, ಮುತ್ತಿ, ಶಾಂತಿ, ಸೀತೆ, ಅಣ್ಣಪ್ಪ, ಮಣಿ, ಚಲುವ, ಸುನೋಜಮ್ಮ, ಹಸೀನಾ, ಸಹ ಶಿಕ್ಷಕರಾದ ತಿರುನೆಲ್ಲಿಮಡ ಜೀವನ್ ಹಾಜರಿದ್ದರು. ಎಲ್ಲರಿಗೂ ಸಿಹಿ ಊಟ ನೀಡಲಾಯಿತು.ಹೆಬ್ಬಾಲೆ: ಮಕ್ಕಳಿಗೆ ಸೃಜನಶೀಲ ಚಟುವಟಿಕೆಗಳೊಂದಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸಿ, ಅವರ ಶೈಕ್ಷಣಿಕ ಪ್ರಗತಿಗೆ ಪೋಷಕರು ಶ್ರಮಿಸಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೋಷಕರ ಮತ್ತು ಉಪನ್ಯಾಸಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎಲ್.ಚಿದಾನAದ ಕುಮಾರ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದಿದ ಬಹುತೇಕ ಮಂದಿ ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ಅಲಂಕರಿಸಿದ್ದಾರೆ. ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಪ್ರತಿಭಾವಂತ ಶಿಕ್ಷಕರು, ಉಪನ್ಯಾಸಕರು ಇದ್ದಾರೆ. ಜೊತೆಗೆ ಸರ್ಕಾರ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸುತ್ತಿದೆ ಎಂದರು.

ಕಾಲೇಜು ಪ್ರಾಂಶುಪಾಲ ಹಂಡ್ರAಗಿ ನಾಗರಾಜು ಮಾತನಾಡಿ, ಮಕ್ಕಳ ಸರ್ವತೋಮುಖ ವಿಕಾಸದಲ್ಲಿ ಶಾಲೆ ಮತ್ತು ಶಿಕ್ಷಕರಷ್ಟೇ ಪಾತ್ರ ಕುಟುಂಬ ಹಾಗೂ ಪಾಲಕರದ್ದು ಎಂಬುದನ್ನು ಮರೆಯಬಾರದು ಎಂದರು.

ಕೂಡುಮAಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ, ಉತ್ತಮ ಮೌಲ್ಯಗಳನ್ನು ಚಿಕ್ಕ ವಯಸ್ಸಿನಿಂದ ಹೇಳಿಕೊಡುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯ ಎಂದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹೆಚ್.ಕೆ. ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು.

ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಈರಪ್ಪ ಹಾಗೂ ಪೋಷಕರು ಪಾಲ್ಗೊಂಡಿದ್ದರು. ಉಪನ್ಯಾಸಕ ರಮೇಶ್ ಸಂವಿಧಾನ ಪೀಠಿಕೆ ವಾಚಿಸಿದರು.

ಹನುಮರಾಜ್ ವಂದಿಸಿದರು. ಇದೇ ಸಂದರ್ಭ ಕಾಲೇಜಿನಲ್ಲಿ ಅತಿಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ಮಕ್ಕಳ ಪೋಷಕರನ್ನು ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.ಶನಿವಾರಸಂತೆ: ಪಟ್ಟಣದ ಸುಪ್ರಜ ಗುರುಕುಲ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆ ಹಾಗೂ ಶನಿವಾರಸಂತೆ ವಲಯ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಶಾಲಾ ಆವರಣದಲ್ಲಿ ಚಿಣ್ಣರು ಅರಣ್ಯ, ವನ್ಯಜೀವಿ ಕುರಿತು ವಿವಿಧ ಚಿತ್ರಗಳನ್ನು ರಚಿಸುವ ಮೂಲಕ ಅರಣ್ಯದ ಮಹತ್ವದ ಬಗ್ಗೆ ಸಂದೇಶ ಸಾರಿದರು.

ಸೋಮವಾರಪೇಟೆ ತಾಲೂಕಿನ ವಿವಿಧ ಶಾಲೆಗಳ ೬೦ಕ್ಕೂ ಅಧಿಕ ೪ ರಿಂದ ೧೦ನೇ ತರಗತಿಯವರೆಗೆ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ “ಅರಣ್ಯ ಬೆಳೆಸಿ-ನಾಡು ಉಳಿಸಿ ‘ಅರಣ್ಯ ನಾಶ ಮಾಡಬೇಡಿ-ಗಿಡ ನೆಟ್ಟು ಪೋಷಿಸಿ’ ಇತ್ಯಾದಿ ಘೋಷಣೆಯ ಸಂದೇಶ ಸಾರುವ ಮೂಲಕ ವರ್ಣ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದು ಪ್ರತಿಭೆ ಅನಾವರಣಗೊಳಿಸಿದರು.

ನಂತರ ನಡೆದ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸರ್ದಾರ್ ಅಹಮ್ಮದ್ ಮಾತನಾಡಿ, ಮೊದಲಿಗೆ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ. ಸೋಲು-ಗೆಲುವು ಮುಖ್ಯವಲ್ಲ. ಮೊಬೈಲ್ ಬಳಕೆ ಒಳ್ಳೆಯದಲ್ಲ.

ಸದುದ್ದೇಶಕ್ಕೆ ಮಾತ್ರ ಬಳಕೆಯಾಗಲಿ. ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಪುನೀತ್ ಮಾತನಾಡಿ, ಹೆಚ್ಚುತ್ತಿರುವ ಅರಣ್ಯ ನಾಶ ಹಾಗೂ ಒತ್ತುವರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುವಂತಾಗಿದೆ. ಜಾಗತಿಕ ತಾಪಮಾನವು ಅಧಿಕವಾಗುತ್ತಿದೆ. ಹವಾಮಾನದ ವೈಪರೀತ್ಯ, ಪ್ಲಾಸ್ಟಿಕ್ ಬಳಕೆ ಸಹ ಅರಣ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಪ್ಲಾಸ್ಟಿಕ್ ಬಳಕೆಯನ್ನು ತಡೆಗಟ್ಟಬೇಕು ಎಂದರು.

ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್, ದುಂಡಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಬ್ಬಾಸ್ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸುಪ್ರಜ ಗುರುಕುಲ ವಿದ್ಯಾಸಂಸ್ಥೆಯ ಅಧ್ಯಕ್ಷೆ ಸುಜಲಾದೇವಿ ಮಾತನಾಡಿ, ಅರಣ್ಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚಿತ್ರಕಲಾ ಸ್ಪರ್ಧೆ ಮತ್ತಿತರ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅನಿವಾರ್ಯವಾಗಿದೆ ಎಂದರು.

ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.ಕುವೆಂಪು ವಿದ್ಯಾಸಂಸ್ಥೆಯ ಉಪನ್ಯಾಸಕ ಲಾಂಚನ್, ಶಿಕ್ಷಕರು ಇದ್ದರು. ಪತ್ರಕರ್ತ ವಿಘ್ನೇಶ್ ಭೂತನಕಾಡು ಪ್ರಾಸ್ತಾವಿಕ ನುಡಿಯಾಡಿದರು. ತಾಲೂಕು ವರದಿಗಾರ ಮುರಳೀಧರ್ ಹಾಗೂ ಶನಿವಾರಸಂತೆ ವರದಿಗಾರ ಕಾರ್ಯಕ್ರಮ ನಿರ್ವಹಿಸಿದರು.ನಾಪೋಕ್ಲು: ಶಿಸ್ತು ಸಂಯಮ ಹಾಗೂ ದುಶ್ಚಟ ರಹಿತವಾಗಿ ಏಕಾಗ್ರತೆಯಿಂದ ನಡೆಸುವ ಜೀವನ ಆರೋಗ್ಯಕ್ಕೆ ಪೂರಕವಾಗಿದೆ ಎಂದು ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪಲ್ಲವಿ ಹೆಚ್.ಸಿ. ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪದವಿ ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ನಾಪೋಕ್ಲು ಮತ್ತು ರಾಷ್ಟಿçÃಯ ಸೇವಾ ಯೋಜನೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿಯ ಶಿಬಿರಾಧಿಕಾರಿ ನಂದಕುಮಾರ್ ಪಿ.ಪಿ. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಇದುವರೆಗೆ ಕರ್ನಾಟಕ ರಾಜ್ಯದ ೨೦,೯೭೫ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ನಡೆಸಿ ೨೦,೫೧,೯೪೭ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ. ಜನಜಾಗೃತಿ ವೇದಿಕೆಯ ಮುಖೇನ ಸಮುದಾಯದ ಸಹಭಾಗಿತ್ವದೊಂದಿಗೆ ಇದುವರೆಗೆ ೨೦೦೦ ಮದ್ಯವರ್ಜನ ಶಿಬಿರಗಳನ್ನು ನಡೆಸಿ ೧ ಲಕ್ಷದ ೩೩ ಸಾವಿರಕ್ಕೂ ಮಿಕ್ಕಿ ಮದ್ಯವ್ಯಸನಿಗಳನ್ನು ವ್ಯಸನಮುಕ್ತಗೊಳಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರುಗಳಾದ ರಮೇಶ್ ಮೂಲ್ಯ, ರವಿ, ನಾಗರಾಜ್, ಶಿವಕುಮಾರ್, ರಮೇಶ್, ಜೆಸ್ಮಿ, ಸಹನ, ಚಾಂದಿನಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಾಗಮಂಡಲ ವಲಯ ಮೇಲ್ವಿಚಾರಕ ಸುನಿಲ್ ಕುಮಾರ್, ನಾಪೋಕ್ಲು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಉಮಾಲಕ್ಷ್ಮಿ, ಒಕ್ಕೂಟದ ಅಧ್ಯಕ್ಷ ಶರವಣ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮೇಲ್ವಿಚಾರಕ ಸುನಿಲ್ ಕುಮಾರ್ ಪ್ರಾಸ್ತಾವಿಕ ಮಾತನಾಡಿ, ಉಪನ್ಯಾಸಕರುಗಳಾದ ಚಾಂದಿನಿ ಸ್ವಾಗತಿಸಿ, ರಮೇಶ್ ನಿರೂಪಿಸಿ, ರಮೇಶ್ ಮೂಲ್ಯ ವಂದಿಸಿದರು.ಅತ್ತೂರು: ಕುಶಾಲನಗರ ಸಮೀಪದ ಅತ್ತೂರಿನ ಜ್ಞಾನಗಂಗಾ ವಸತಿ ಶಾಲೆಯಲ್ಲಿ ೨೦೨೫-೨೬ರ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟಕ್ಕೆ ಅಂತರರಾಷ್ಟಿçÃಯ ಖೋ-ಖೋ ಕ್ರೀಡಾಪಡು ಚೈತ್ರ ಬಿ. ಅವರು ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಚಾಲನೆ ನೀಡಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸಾಧನೆ ಮಾಡಬೇಕಾದರೆ ಹಲವು ಎಡರು-ತೊಡರುಗಳು ಎದುರಾಗುತ್ತವೆ. ಅವನ್ನೆಲ್ಲಾ ಮೀರಿ ಸಾಧನೆಯ ಗುರಿಯ ಕಡೆಗೆ ಸಾಗಬೇಕು ಎಂದು ಹೇಳಿದರು. ಆಡಳಿತ ಮಂಡಳಿ ಅಧ್ಯಕ್ಷ ಟಿ.ಕೆ. ಸುದೀರ್ ಮಾತನಾಡಿ, ಆರೋಗ್ಯವೇ ಭಾಗ್ಯ. ಉತ್ತಮ ಆರೋಗ್ಯ ಮತ್ತು ದೈಹಿಕ ಸದೃಢತೆ ನಮ್ಮದಾಗಬೇಕಾದರೆ ಕ್ರೀಡೆ ಅತೀ ಅವಶ್ಯಕ ಎಂದರು.

ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ.ಎಸ್. ನಿಂಗಪ್ಪ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಮನುಷ್ಯನಿಗೆ ಉತ್ತಮ ಆರೋಗ್ಯ ಇರಬೇಕಾದರೆ ಮನಸ್ಸಿಗೆ ಧ್ಯಾನ, ದೇಹಕ್ಕೆ ಕ್ರೀಡೆ ಅವಶ್ಯಕ. ಹಾಗಾಗಿ ಪ್ರತಿಯೊಬ್ಬರು ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಅನಂತ ಪದ್ಮನಾಭನ್ ಮತ್ತು ಶೋಭ ಅನಂತ ಪದ್ಮನಾಭನ್, ಪ್ರಾಂಶುಪಾಲರಾದ ಸತ್ಯ ಸುಲೋಚನ ಎಸ್.ಎಂ., ಉಪಪ್ರಾಂಶುಪಾಲ ಸಿ.ಕೆ. ನಾಗರಾಜ್ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ವೀರಾಜಪೇಟೆ: ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ವೃತ್ತದ, ವೀರಾಜಪೇಟೆ ವಿಭಾಗದಿಂದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಶಿಬಿರದಲ್ಲಿ ಆಯೋಜಿಸಲ್ಪಟ್ಟ ಚಿಣ್ಣರ ವನದರ್ಶನ ಕಾರ್ಯಕ್ರಮದಲ್ಲಿ ಬಿಳುಗುಂದದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ೩೧ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗಳು ಭಾಗವಹಿಸಿದ್ದರು.

ವೀರಾಜಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪಿ. ಗೋಪಾಲ್, ವೀರಾಜಪೇಟೆ ವಲಯದ ವಲಯ ಅರಣ್ಯಾಧಿಕಾರಿ ಕೆ.ವಿ. ಶಿವರಾಂ ಅವರ ಮಾರ್ಗದರ್ಶನದಲ್ಲಿ ಅಮ್ಮತ್ತಿ ವಲಯಾಧಿಕಾರಿ ನಂದೀಶ್ ಮುಂದಾಳತ್ವದಲ್ಲಿ ಎರಡು ದಿನಗಳ ವನದರ್ಶನ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳು ಬ್ಯಾಗ್, ಕೈಪಿಡಿ, ಬರವಣಿಗೆ ಸಾಮಗ್ರಿಗಳನ್ನು ಪಡೆದುಕೊಂಡು ಮೃತ್ಯುಂಜಯ ದೇವಸ್ಥಾನ, ಟೀ ಎಸ್ಟೇಟ್, ಇರ್ಪು ಜಲಪಾತಗಳಿಗೆ ಭೇಟಿ ನೀಡಿ ನಾಗರಹೊಳೆಗೆ ಭೇಟಿ ನೀಡಿದರು.

ಅಲ್ಲಿ ಸಫಾರಿಗೆ ತೆರಳಿ ವಿವಿಧ ಪ್ರಾಣಿ, ಪಕ್ಷಿಗಳನ್ನು ಕಂಡು ಸಂಭ್ರಮಿಸಿದರು. ಮರುದಿನ ಮತ್ತಿಗೋಡು ಸಾಕಾನೆ ಶಿಬಿರ, ಮಜ್ಜಿಗೆಹಳ್ಳ ಸಸ್ಯಕ್ಷೇತ್ರ ಹಾಗೂ ಫಾರೆಸ್ಟ್ ಡಿಪೋಗೆ ಭೇಟಿ ನೀಡಲಾಯಿತು. ಅಲ್ಲಿನ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಅರಣ್ಯ, ಸಸ್ಯ ಸಂಪತ್ತುಗಳ ಬಗ್ಗೆ ಮಾಹಿತಿಯನ್ನು ನೀಡಿದರು.ಮಡಿಕೇರಿ: ಮೂರ್ನಾಡಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ ನಡೆದ ಮೂರ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಾಪೋಕ್ಲು ಸಮೀಪದ ಹೊದವಾಡದ ರಾಫೆಲ್ಸ್ ಇಂಟರ್‌ನ್ಯಾಷನಲ್ ಇಂಗ್ಲಿಷ್ ಸ್ಕೂಲ್ ಮತ್ತು ಪಿಯು ಕಾಲೇಜು, ಮಕ್ಕಳು ಭಾಗವಹಿಸಿ ೧೧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನವನ್ನು ೩ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ೯ ಸ್ಪರ್ಧೆಗಳಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.ಮಡಿಕೇರಿ: ಇತ್ತೀಚೆಗೆ ಗದಗ್‌ನ ಹುಲಕೋಟಿಯ ಶ್ರೀ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ೧೯೯೩-೨೦೦೪ ರ ಸಾಲಿನ ವಸತಿ ಶಾಲೆಯ ವಿದ್ಯಾರ್ಥಿಗಳು ಅಂದು ಸೇವೆ ಸಲ್ಲಿಸಿದ್ದ ಶಿಕ್ಷಕರಿಗೆ ಶಾಲೆಯ ಸಭಾಂಗಣದಲ್ಲಿ ಸನ್ಮಾನಿಸಿ, ಗುರುವಂದನೆ ಸಲ್ಲಿಸಿದರು.

ಮಡಿಕೇರಿಯ ಹರೀಶ್ ಸರಳಾಯ ಹಾಗೂ ಬಿಂದು ಅವರು ಈ ಶಾಲೆಯಲ್ಲಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಈ ಸಂದರ್ಭ ಇವರನ್ನು ಸನ್ಮಾನಿಸಲಾಯಿತು. ಡಾ. ಪವನ್ ಪಾಟೀಲ್ ಕಾರ್ಯಕ್ರಮ ನಿರೂಪಿಸಿ, ಸಚಿನ್ ಪಾಟೀಲ್ ಸ್ವಾಗತಿಸಿ, ವಂದನಾರ್ಪಣೆಯನ್ನು ಕಾರ್ತಿಕ್ ಗದಗ್ ನಡೆಸಿಕೊಟ್ಟರು.