ಗೋಣಿಕೊಪ್ಪಲು, ನ. 20: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಂಗಾಲ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.

ಗ್ರಾಮದ ಪಾತಂಡ ರಂಜನ್ ಸಂತೋμï ಎಂಬವರಿಗೆ ಸೇರಿದ ಹಸುವಿನ ಮೇಲೆ ಸಂಜೆ ವೇಳೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.

ಹಸುವಿನ ಮಾಲೀಕರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಕಂಡಂಗಾಲ ಗ್ರಾಮದಲ್ಲಿ ಕಾಣಿಸಿಕೊಂಡ ಹುಲಿಯು ಬಿ. ಶೆಟ್ಟಿಗೇರಿ 4ಏಳನೇ ಪುಟಕ್ಕೆ(ಮೊದಲ ಪುಟದಿಂದ)

ಗ್ರಾಮದತ್ತ ತೆರಳಿರುವ ಬಗ್ಗೆ ಮಾಹಿತಿ ಲಭ್ಯವಿರುವುದರಿಂದ ಬಿ. ಶೆಟ್ಟಿಗೇರಿ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಜಾನುವಾರುಗಳ ಬಗ್ಗೆ ಗಮನ ಹರಿಸುವಂತೆ ಹಾಗೂ ಗ್ರಾಮಸ್ಥರು ಎಚ್ಚರಿಕೆಯಿಂದ ಓಡಾಡುವಂತೆ ಬಿ. ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಕೊಲ್ಲಿರ ಬೋಪಣ್ಣ ಮನವಿ ಮಾಡಿದ್ದಾರೆ.

- ಹೆಚ್.ಕೆ. ಜಗದೀಶ್