ಚೆಯ್ಯಂಡಾಣೆ, ನ. 20: ವ್ಯಸನ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದ ಪ್ರಯುಕ್ತ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಾಪೆÇೀಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಈ ಸಂದರ್ಭ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಓಂಪ್ರಕಾಶ್, ಅಂಗನವಾಡಿ ಕಾರ್ಯಕರ್ತೆ ಆಶಾಲತಾ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಭಾರ ಪ್ರಾಂಶುಪಾಲರಾದ ಎ.ಎಂ. ವಿಶಾಲ, ಶಾಲೆಯ ಉಪನ್ಯಾಸಕರು, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.