ಕಡಂಗ, ನ. 20: ಸಿದ್ದಾಪುರ ಸಮೀಪದ ಇಂಜಿಲಗೆರೆ ಗ್ರಾಮದ ಬದ್ರಿಯಾ ಜಮಾಅತ್ ವತಿಯಿಂದ ನಡೆಸಲಾದ ಸ್ವಲಾತ್ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್ ಕೋಳುಮಂಡ ಅವರನ್ನು ವೀರಾಜಪೇಟೆ ಶಾಸಕ ಎ.ಎಸ್. ಪೆÇನ್ನಣ್ಣ ಅವರ ಸಮ್ಮುಖದಲ್ಲಿ ಜಮಾಅತ್ ಕಮಿಟಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ವಕ್ತಾರ ತೆನ್ನಿರ ಮೈನಾ, ಪ್ರಮುಖರಾದ ಉಮ್ಮರ್, ನೌಶಾದ್ ಇಂಜಿಲಗೆರೆ ಮತ್ತು ಜಮಾಅತ್ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.