ಹೆಬ್ಬಾಲೆ, ನ. 20: ರೈತರು ನೀರು ಮತ್ತು ಮಣ್ಣಿನ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಧಾರವಾಡ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ)ಯ ಸಹ ಪ್ರಾಧ್ಯಾಪಕ ಕೆ.ಎಸ್.ಸುಧೀಂದ್ರ ಸಲಹೆ ನೀಡಿದರು.
ಧಾರವಾಡ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ), ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಹಾರಂಗಿ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಮಹಾಮಂಡಳ, ನೀರು ಬಳಕೆದಾರರ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಹಾಲು ಉತ್ಪಾದಕರ ಸಹಕಾರ ಸಂಘ ತೊರೆನೂರು ಸಂಯುಕ್ತಾಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ತೊರೆನೂರು ಬಯಲು ರಂಗಮಂದಿರದಲ್ಲಿ ಏರ್ಪಡಿಸಿದ್ದ ಸಮಗ್ರ, ಜಲ, ನೆಲ ಸಂರಕ್ಷಣೆ, ನಿರ್ವಹಣೆ ಹಾಗೂ ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆ ಕುರಿತು ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸುಸ್ಥಿರರಾಗಬೇಕು. ವಾಲ್ಮಿ ಸಂಸ್ಥೆ ವತಿಯಿಂದ ರೈತರಿಗೆ ತಾಂತ್ರಿಕ ನಿರ್ವಹಣೆ, ತರಬೇತಿ, ರೈತರಿಗೆ ಅರಿವು, ಹೊಸ ತಾಂತ್ರಿಕತೆ ಕುರಿತು ಸಮಗ್ರ ಮಾಹಿತಿಯನ್ನು ಒದಗಿಸುತ್ತಿದೆ ಎಂದರು.
ಮಳೆ ಕ್ಷೀಣವಾಗಿ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದ ಸಂದರ್ಭ. ಇರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಹೆಚ್ಚಿನ ಸ್ಟೋರೇಜ್ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಅಣೆಕಟ್ಟನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ತಾಲೂಕು ಗ್ಯಾರಂಟಿ ಅನುμÁ್ಠನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂತಹ ಕಾರ್ಯಾಗಾರಗಳು ರೈತರಿಗೆ ಬಹಳ ಸಹಕಾರಿಯಾಗಿದೆ. ರೈತರು ನೀರಿನ ಸಮರ್ಪಕ ನಿರ್ವಹಣೆಯಿಂದ ಉತ್ತಮ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬೇಕು.
ವಾಲ್ಮಿ ಸಹ ಪ್ರಾಧ್ಯಾಪಕ ಪ್ರದೀಪ ದೇವರಮನಿ ಅವರು ರಾಷ್ಟ್ರೀಯ ಸಹಕಾರ ನೀತಿ -2025, ಸಹಾಯಕ ಪ್ರಾಧ್ಯಾಪಕ ನಾಗರಾಜ ತಹಶೀಲ್ದಾರ, ಮಣ್ಣು ಮತ್ತು ನೀರು ಪರೀಕ್ಷಾ ವಿಧಾನಗಳು, ಜೈವಿಕ ಗೊಬ್ಬರಗಳ ಬಳಕೆ ಹಾಗೂ ಸಮಾಲೋಚಕ ಸುರೇಶ್ ಕುಲಕರ್ಣಿ ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆ, ಆರ್ಥಿಕ ಸುಸ್ಥಿರತೆ ಕುರಿತು ಮಾತನಾಡಿದರು.
ತೊರೆನೂರು ವಿರಕ್ತ ಮಠದ ಮಲ್ಲೇಶಸ್ವಾಮಿ ದಿವ್ಯಸಾನಿಧ್ಯ ವಹಿಸಿದ್ದರು. ತೊರೆನೂರು ನೀರು ಬಳಕೆದಾರರ ಸಂಘದ ಅಧ್ಯಕ್ಷ ಟಿ.ಕೆ.ಪಾಂಡುರಂಗ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಪ್ರಕಾಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಬಿ. ಜಗದೀಶ್, ನಿರ್ದೇಶಕ ಕೆ.ಎಸ್. ಕೃμÉ್ಣೀಗೌಡ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಟಿ.ಟಿ. ಪ್ರಕಾಶ್, ಹಾರಂಗಿ ನೀರಾವರಿ ಸಲಹಾ ಸಮಿತಿ ಸದಸ್ಯೆ ಉಮಾಪ್ರಭಾಕರ್, ಹರೀಶ್, ಕೇಶವಗೌಡ, ಗ್ರಾಮ ಪಂಚಾಯಿತಿ ಸದಸ್ಯೆ ನಿಂಗಜಮ್ಮ, ಮಾಜಿ ಉಪಾಧ್ಯಕ್ಷ ಪಿ.ಡಿ. ರವಿಕುಮಾರ್, ಎಪಿಸಿಎಂಎಸ್ಸಿ ನಿರ್ದೇಶಕ ಎಚ್.ಬಿ. ಚಂದ್ರಪ್ಪ, ನೀರು ಬಳಕೆದಾರರ ಸಂಘದ ಉಪಾಧ್ಯಕ್ಷ ಟಿ.ಎ.ರವಿಚಂದ್ರ, ನೀರಾವರಿ ಇಲಾಖೆಯ ಕಿರಿಯ ಎಂಜಿನಿಯರ್ ಸೌಮ್ಯ, ಮತ್ತಿತರರು ಪಾಲ್ಗೊಂಡಿದ್ದರು. ಸಂಘದ ಕಾರ್ಯದರ್ಶಿ ಟಿ.ಜಿ. ಲೋಕೇಶ್ ವರದಿ ವಾಚನ ಮಾಡಿದರು.