ಮಡಿಕೇರಿ, ನ. 20: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ತಾ. 26 ರಂದು ನಡೆಯುವ 35ನೇ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಹಾರ್ವರ್ಡ್ ವಿಶ್ವವಿದ್ಯಾನಿಲಯದ ವಿದ್ವಾಂಸ ಡಾ. ಸಂಜೀವ್ ಚೋಪ್ರಾ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಅವರು ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಡಾ.ಸಂಜೀವ್ ಚೋಪ್ರಾ ಅವರು ಖ್ಯಾತ ಹಾರ್ವರ್ಡ್ ವಿದ್ವಾಂಸ, ಇತಿಹಾಸಕಾರ, ರಾಜಕೀಯ ವಿಜ್ಞಾನಿ ಮತ್ತು ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದು, ಕೊಡವ ನ್ಯಾಷನಲ್ ಡೇಯಲ್ಲಿ ಭಾರತೀಯ ಸಂವಿಧಾನದ 5ನೇ ಶೆಡ್ಯೂಲ್ ಪಟ್ಟಿ ಅಡಿಯಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಅನ್ವೇಷಣೆಯ ಕುರಿತು ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.