ಶನಿವಾರಸಂತೆ, ನ. 20: ಕೊಡಗು ಜಿಲ್ಲಾ ಪಂಚಾಯಿತಿ, ಸೋಮವಾರಪೇಟೆ ತಾಲೂಕು ಪಂಚಾಯಿತಿ ಹಾಗೂ ದುಂಡಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೂತನವಾಗಿ ನಿರ್ಮಾಣವಾಗಿರುವ ಪಂಚಾಯಿತಿ ಕಚೇರಿ ಮೇಲ್ಭಾಗದ ಸಂಜೀವಿನಿ ಸಭಾಂಗಣ ಹಾಗೂ ವಾಲಿಬಾಲ್ ಅಂಕಣವನ್ನು ಸಂಸದ ಯದುವೀರ್ ಒಡೆಯರ್ ಲೋಕಾರ್ಪಣೆಗೊಳಿಸಿದರು.

ನಂತರ ಸಂಜೀವಿನಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಂಸದರು, ದುಂಡಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಸುಂದರವಾದ ಸಂಜೀವಿನಿ ಸಭಾಂಗಣ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳು, ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದುತ್ತಾ ಮಾದರಿಯಾಗುತ್ತಿವೆ. ಜಿಲ್ಲೆ ಪ್ರವಾಸೋದ್ಯಮ ಹಾಗೂ ಸಾಂಸ್ಕøತಿಕ ದೃಷ್ಟಿಯಲ್ಲೂ ಅಭಿವೃದ್ಧಿ ಹೊಂದಿದೆ. ಶನಿವಾರಸಂತೆ- ಕೊಡ್ಲಿಪೇಟೆ ಭಾಗದಲ್ಲಿ ಮತ್ತಷ್ಟು ಅಭಿವೃದ್ಧಿಯಾಗಬೇಕಿದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಸಿ.ಜೆ. ಗಿರೀಶ್ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿ ಗುರುಪ್ರಸನ್ನ, ಉಪಾಧ್ಯಕ್ಷೆ ಗೋಪಿಕಾ, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿμÁ, ಮಾಜಿ ಅಧ್ಯಕ್ಷರುಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ರಾಕೇಶ್, ಬಿಜೆಪಿ ಮುಖಂಡರು, ಗ್ರಾಮ ಪ್ರಮುಖರು ಹಾಜರಿದ್ದರು. ಸಿ.ಜೆ. ಗಿರೀಶ್ ಸ್ವಾಗತಿಸಿ, ಶಿಕ್ಷಕ ಕೆ.ಪಿ. ಜಯಕುಮಾರ್ ನಿರೂಪಿಸಿದರು.