ಮಡಿಕೇರಿ, ನ. ೨೧: ೮ನೇ ರಾಷ್ಟಿçÃಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ಜಾಗೃತಿ ಶಿಬಿರದ ಸಮಾರೋಪ ಸಮಾರಂಭ ನಗರದ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಸಂಪನ್ನಗೊAಡಿತು.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೇಂದ್ರ ಆಯುಷ್ ಇಲಾಖೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ಹಾಗೂ ಭಾರತೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದವೀದರರ ಸಂಘ ಇವರ ಸಹಯೋಗದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮತ್ತು ಆಸ್ಪತ್ರೆ ಉಜಿರೆ ವತಿಯಿಂದ ರಾಜ್ಯದ ೨೩೬ ತಾಲೂಕುಗಳಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ೩೩ಕ್ಕೂ ಹೆಚ್ಚು ಶಿಬಿರಗಳನ್ನು ಹಮ್ಮಿಕೊಂಡಿದ್ದು, ೧೩೦೦ಕ್ಕೂ ಹೆಚ್ಚು ಜನಸಾಮಾನ್ಯರಲ್ಲಿ ಆರೋಗ್ಯ ಜಾಗೃತಿ ಹಾಗೂ ಪ್ರಕೃತಿ ಚಿಕಿತ್ಸೆಯ ಕುರಿತು ಮಾಹಿತಿಯನ್ನು ನೀಡುವಲ್ಲಿ ಅನನ್ಯ, ಎನ್. ಲೇಖ, ಶೋಭಿತ ಎ.ಜೆ. ಸ್ನೇಹ, ಪಿ. ಆನಂದ್, ಬಿ.ಆರ್. ದೀಕ್ಷ, ಕುನಲ್ ದೇವಯ್ಯ ವೈದ್ಯರ ತಂಡ ಯಶಸ್ವಿಯಾಗಿದೆ, ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಜಿಲ್ಲಾ ನಿರ್ದೇಶಕಿ ಲೀಲಾವತಿ ನೆರವೇರಿಸಿ, ಪೋಷಕರು ಮಕ್ಕಳಿಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಆಯುಷ್ ಅಧಿಕಾರಿ ಡಾ. ಶೈಲಜಾ ವಹಿಸಿಕೊಂಡು ದೋಷರಹಿತ ಮಾನವನ ಸರ್ವತೋಮುಖ ಸ್ವಾಸ್ಥö್ಯ ಕಾಪಾಡುವ ಆಯುಷ್ ಪ್ರಕೃತಿ ಚಿಕಿತ್ಸಾ ವಿಧಾನವನ್ನು ಬಳಸುವಂತೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಇಲಾಖೆ ಆಡಳಿತಾಧಿಕಾರಿ ಕಾವೇರಪ್ಪ, ಯೋಗ ಒಕ್ಕೂಟದ ಮಹೇಶ್ ಕೆ.ಕೆ. ಭಾಗವಹಿಸಿದ್ದರು. ಜಿಲ್ಲಾ ಬೋಧಕ ಆಸ್ಪತ್ರೆ ಆಯುಷ್ ವಿಭಾಗದ ವೈದ್ಯಾಧಿಕಾರಿ ಡಾ. ಅರುಣ್ ಅವರು ಶಿಬಿರದ ವರದಿ ಮಂಡಿಸಿ, ಸ್ವಾಗತಿಸಿದರು. ಡಾ. ಅನನ್ಯ ವಂದಿಸಿ, ಲೇಖ ನಿರೂಪಣೆ ಮಾಡಿದರು.