ಬೆಂಗಳೂರು, ನ. ೨೧: ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆಯುಂಟಾಗಿದ್ದು ಇದೀಗ ರಾಷ್ಟಿçÃಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಧ್ಯೆ ಪ್ರವೇಶ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣಗಳ ನಡುವೆ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಜಟಾಪಟಿ ನಡೆಯುತ್ತ್ತಿದ್ದು ಇದನ್ನು ಸರಿಪಡಿಸುವ ಸಲುವಾಗಿ ಖರ್ಗೆ ಕಣಕ್ಕಿಳಿದಿದ್ದಾರೆ. ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು ತಮ್ಮನ್ನು ಭೇಟಿ ಮಾಡುವಂತೆ ಡಿ.ಸಿ.ಎಂ ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ ಸುರೇಶ್ ಇವರುಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಆ ಬಳಿಕ ಸಿ.ಎಂ. ಸಿದ್ದರಾಮಯ್ಯ ಅವರೊಂದಿಗೂ ಸಮಾಲೋಚಿಸಲಿದ್ದಾರೆ.
ಕಾಂಗ್ರೆಸ್ ಸರಕಾರ ಎರಡೂವರೆ ವರ್ಷದ ಅವಧಿ ಆಡಳಿತ ನಡೆಸಿದ ಬಳಿಕ ಮುಖ್ಯ ಆಡಳಿತ ಚುಕ್ಕಾಣಿಗಾಗಿ ಒಳಗಿಂದೊಳಗೇ ನಡೆಯುತ್ತಿದ್ದ ಸಮರ ಇದೀಗ ಸ್ಪಷ್ಟವಾಗಿ ಬಹಿರಂಗಗೊAಡಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಅಧಿಕಾರ ಹಂಚಿಕೆಯ ಜಟಾಪಟಿ ನಡೆದಿದ್ದು, ಡಿ.ಕೆ. ಶಿವಕುಮಾರ್ ಬಣದ ಕೆಲ ಸಚಿವರು, ಶಾಸಕರು ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ತೆರಳಿದ್ದಾರೆ.
ಇದರ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಸಚಿವರುಗಳು ರಹಸ್ಯ ಸಭೆ ನಡೆಸಿದ್ದು, ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬAಧಿಸಿದAತೆ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ. ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದರು.ಹೈಕಮಾAಡ್ ಎಂದೂ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಮತ್ತು ಮುಂದಿನ ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಸಿಎಂ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಬದಲಾವಣೆ ಮಾಡಲು ಒತ್ತಡ ಹೇರುವ ನಿಟ್ಟಿನಲ್ಲಿ ದೆಹಲಿಗೆ ತೆರಳಿರುವ ಶಾಸಕರ ಟೀಂಗೂ ಖಡಕ್ ಸಂದೇಶ ರವಾನಿಸಿದ್ದಾರೆ.ಇನ್ನು ಈ ಬಣ ರಾಜಕೀಯ ಚಟುವಟಿಕೆಗಳ ಬಗ್ಗೆ ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿÀ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಕಳೆದ ಎರಡೂವರೆ ವರ್ಷಗಳಿಂದ ಸಾಕಷ್ಟು ಔತಣಕೂಟ ನಡೆದಿದೆ. ನಾಲ್ವರನ್ನು ಡಿಸಿಎಂ ಮಾಡಬೇಕು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಿಸಬೇಕು. ಸಂಪುಟಕ್ಕೆ ಕೆಲವರನ್ನು ಸೇರಿಸಿಕೊಳ್ಳಬೇಕೆಂದು ಸಾಕಷ್ಟು ಡಿನ್ನರ್ ಸಭೆ ನಡೆದಿವೆ. ಇಂದು ಸಚಿವರ ಡಿನ್ನರ್ ಕೂಡ ಅದರ ಒಂದು ಭಾಗವೇ ಆಗಿದೆ ಎಂದು ಮಾರ್ಮಿಕವಾಗಿ ಹೇಳಿದರು.
ನನ್ ಹತ್ರ ಯಾವ್ ಬಣನೂ ಇಲ್ಲ. ನಾನು ೧೪೦ ಶಾಸಕರಿಗೆ ಅಧ್ಯಕ್ಷ. ನನಗೆ ೧೪೦ ಜನನೂ ಪ್ರಮುಖರು. ನಾನು ಯಾವ ಗುಂಪನ್ನೂ ಕರೆದುಕೊಂಡು ಹೋಗಲು ಇಷ್ಟವಿಲ್ಲ. ಬಣ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ ಎಂದರು. ಅವರವರ ಪಾಡಿಗೆ ಕೆಲವರು ದೆಹಲಿಗೆ ತೆರಳಿದ್ದಾರೆ ಎಂದರು.
ಇದೇ ವೇಳೆ ೫ ವರ್ಷ ನಾನೇ ಸಿಎಂ ಆಗಿರುತ್ತೇನೆಂದು ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡಬೇಕು ಎಂದು ಹೇಳಿದ್ದಾರೆ. ಹೀಗಾಗಿ ಎಲ್ಲ ಶಾಸಕರೂ ತಮಗೆ ಮಂತ್ರಿ ಸ್ಥಾನಬೇಕು ಎಂದು ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಕೇಂದ್ರದ ನಾಯಕರನ್ನು ಭೇಟಿ ಮಾಡಿ ತಮ್ಮ ಮನವಿ ಮಾಡುತ್ತಿದ್ದಾರೆ ಎಂದರು.
ಅAತೆಯೇ ಸಿಎಂ ಸಿದ್ದರಾಮಯ್ಯ ಅವರಿಗೆ ಶುಭಾಶಯ ಹೇಳುತ್ತೇನೆ. ಅವರಿಗೆ ಎಲ್ಲವೂ ಒಳ್ಳೆಯದಾಗಲಿ ಎಂದು ಹಾರೈಸಿದರು. ಈ ಮೂಲಕ ಸಿಎಂ ಆಗಿ ತಾವೇ ಮುಂದುವರೆಯುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.