ವೀರಾಜಪೇಟೆ, ನ. ೨೧: ರಾಷ್ಟಿçÃಯ ಗ್ರಂಥಾಲಯ ಸಪ್ತಾಹ-೨೦೨೫ರ ಅಂಗವಾಗಿ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದ ವೀರಾಜಪೇಟೆ ಶಾಖಾ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಇದರ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮ ನಡೆಯಿತು.
ಸಾಹಿತ್ಯ, ಕಲೆ, ವಿಜ್ಞಾನ ಮತ್ತು ತಂತ್ರಜ್ಞಾನ, ಮಹನೀಯರ ಜೀವನ ಚರಿತ್ರೆ, ಮಕ್ಕಳ ಪುಸ್ತಕ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ಮಕ್ಕಳಿಗೆ ಓದಿನ ಹವ್ಯಾಸ ಬೆಳೆಸುವ ಸಲುವಾಗಿ ಗ್ರಂಥಾಲಯದಲ್ಲಿ ವಿವಿಧ ಪುಸ್ತಕಗಳ ಬಗ್ಗೆ ಸ್ಮರಣ ಶಕ್ತಿ ಸ್ಪರ್ಧೆಯನ್ನು ಮಕ್ಕಳಿಗಾಗಿ ಏರ್ಪಡಿಸಲಾಗಿತ್ತು. ರೋಟರಿ ಪ್ರಾಥಮಿಕ ಶಾಲೆ ಮತ್ತು ಜಿ.ಎಂ.ಪಿ ಶಾಲೆಯ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಸಾರ್ವಜನಿಕ ಗ್ರಂಥಾಲಯದ ಸಹಾಯಕ ಗ್ರಂಥಪಾಲಕ ವಿಜಯನಾಗ್ ಜಿ., ಗ್ರಂಥಾಲಯದ ಸಹಾಯಕ ಸಿಬ್ಬಂದಿ ನಿಮಿತಾ ಮತ್ತು ಶಾಲಾ ಶಿಕ್ಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.