ಮಡಿಕೇರಿ, ನ. ೨೧: ತಾ. ೨೬ ರಂದು ಸಂವಿಧಾನ ದಿನಾಚರಣೆಯನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಸೂಚಿಸಿದ್ದಾರೆ.

ವೀಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು, ಸರ್ಕಾರ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚಿಸಿದೆ. ಆ ದಿಸೆಯಲ್ಲಿ ಜಾಥಾ ಹಾಗೂ ಸಭಾ ಕಾರ್ಯಕ್ರಮ ಏರ್ಪಡಿಸಿ ಸಂವಿಧಾನದ ಮಹತ್ವ ಕುರಿತು ಉಪನ್ಯಾಸ ನೀಡುವಂತಾಗಬೇಕು.

ಕಾರ್ಯಕ್ರಮ ಆಯೋಜನೆ ಸಂಬAಧ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸರ್ಕಾರೇತರ ಸಂಸ್ಥೆಗಳು ಹಾಗೂ ವಿವಿಧ ಸಮಾಜದ ಮುಖಂಡರನ್ನು ಆಹ್ವಾನಿಸಿ ಸಂವಿಧಾನ ದಿನಾಚರಣೆ ಆಚರಿಸುವಂತೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ತಾ. ೨೬ ರಂದು ಸಂವಿಧಾನ ದಿನಾಚರಣೆ ಪ್ರಯುಕ್ತ ಜಾಥ ಏರ್ಪಡಿಸಬೇಕಿದೆ. ತೆರೆದ ವಾಹನದಲ್ಲಿ ಅಂಬೇಡ್ಕರ್ ವೇಷಧಾರಿ ವಿದ್ಯಾರ್ಥಿ ಒಳಗೊಂಡAತೆ ಸಂವಿಧಾನ ಪುಸ್ತಕ ಪ್ರದರ್ಶಿಸಿ ತೆರಳಬೇಕಿದೆ. ಅಂಬೇಡ್ಕರ್ ಅವರ ಚಿಂತನೆಗಳು, ಸಂವಿಧಾನದ ಆಶಯಗಳು, ಮೂಲಭೂತ ಕರ್ತವ್ಯಗಳು ಹಾಗೂ ರಾಜ್ಯ ನಿರ್ದೇಶಕ ತತ್ವಗಳು ಮತ್ತಿತರ ಮಾಹಿತಿ ಒಳಗೊಂಡ ಭಿತ್ತಿಪತ್ರಗಳ ಪ್ರದರ್ಶನ ಕಾರ್ಯಕ್ರಮ ಆಯೋಜಿಸಬೇಕಿದೆ ಎಂದರು.

ಸ್ಥಳೀಯರ ಸಹಕಾರ ಪಡೆದು ಕಾರ್ಯಕ್ರಮ ಆಯೋಜನೆಗೆ ತಾಲೂಕು ಮಟ್ಟದಲ್ಲಿ ಕ್ರಮವಹಿಸುವಂತೆ ತಹಶೀಲ್ದಾರರು ಹಾಗೂ ತಾ.ಪಂ. ಇಓ ಅವರಿಗೆ ಕೋರಿದರು.

ಶಾಲಾ-ಕಾಲೇಜು, ಎನ್‌ಸಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ಸಂಬAಧಪಟ್ಟ ಇಲಾಖೆಗಳು ಅಗತ್ಯ ಕ್ರಮವಹಿಸುವಂತೆ ಮನವಿ ಮಾಡಿದರು.

ತಾಲೂಕು ಮಟ್ಟದಲ್ಲಿ ತಹಶೀಲ್ದಾರರು, ತಾ.ಪಂ. ಇಓ, ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳು, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶೇಖರ್ ಮನವಿ ಮಾಡಿದರು.

ತಹಶೀಲ್ದಾರರಾದ ಪ್ರವೀಣ್, ಕಿರಣ್ ಗೌರಯ್ಯ, ಶ್ರೀಧರ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಿ. ಬಸಪ್ಪ, ತಾ.ಪಂ.ಇಓ ಅಪ್ಪಣ್ಣ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು, ಶಾಲಾ ಶಿಕ್ಷಣ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಇತರರು ಇದ್ದರು.