ಮಡಿಕೇರಿ, ನ. ೨೧: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು ದಿನಾಂಕ:೦೧-೦೧-೨೦೨೬ ರಿಂದ ೬ ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಹಾಗೂ ಸಹಕಾರ ಸಂಘ/ಖಾಸಗಿ ಸಂಸ್ಥೆಗಳ ಸಿಬ್ಬಂದಿಗಳಿಗೆ ದೂರ ಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸುತ್ತಿದ್ದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಎಲ್ಲಾ ಸಹಕಾರ ಸಂಘ ಸಂಸ್ಥೆ/ ಬ್ಯಾಂಕ್‌ಗಳಲ್ಲಿನ ಉದ್ಯೋಗ ನೇಮಕಾತಿಗೆ ಕಡ್ಡಾಯವಾಗಿರುತ್ತದೆ. ತರಬೇತಿ ಪಡೆಯಲು ಕನಿಷ್ಟ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ರೂ. ೬೦೦ ಶಿಷ್ಯವೇತನ ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ. ೫೦೦ ಶಿಷ್ಯ ವೇತನವನ್ನು ನೀಡಲಾಗುವುದು.
ದೂರ ಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯು ಸಹಕಾರ ಸಂಘ/ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಕಡ್ಡಾಯವಾಗಿರುತ್ತದೆ. ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆಸಕ್ತ ಅಭ್ಯರ್ಥಿಗಳು ಸಹ ಅರ್ಜಿಗಳನ್ನು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮಡಿಕೇರಿ ಇಲ್ಲಿ ಪಡೆದು ಸಲ್ಲಿಸಬಹದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ೩೧.೧೨.೨೦೨೫ ಆಗಿದೆ. ಅರ್ಜಿ ಫಾರಂನ್ನು ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ -೫೭೧೨೦೧, ಮುಖ್ಯಕಾರ್ಯನಿರ್ವಹಣಾಧಿಕಾರಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ನಿ., ಪೆನ್ಷನ್‌ಲೇನ್, ನಗರಸಭೆ ಹಿಂಭಾಗ ರಸ್ತೆ, ಮಡಿಕೇರಿ-೫೭೧೨೦೧. ಮುಖ್ಯಕಾರ್ಯನಿರ್ವಹಣಾಧಿಕಾರಿ, ಹಾಸನ ಜಿಲ್ಲಾ ಸಹಕಾರ ಯೂನಿಯನ್, ನಿ., ಹಳೆ ಬಸ್ ನಿಲ್ದಾಣದ ಹತ್ತಿರ, ಹಾಸನ-೫೭೩೨೦೧. ಹೆಚ್ಚಿನ ಮಾಹಿತಿಗೆ ದೂ.ಸಂ.೮೭೯೨೬೨೮೪೩೭, ೯೬೬೩೧೫೩೯೨೨, ೮೭೬೨೯೨೫೮೬೨, ೮೭೬೨೧೧೦೯೫೨ ನ್ನು ಸಂಪರ್ಕಿಸಬಹುದು ಎಂದು ಕೆಐಸಿಎಂ ಪ್ರಾಂಶುಪಾಲ ಪುಟ್ಟಸ್ವಾಮಿ ತಿಳಿಸಿದ್ದಾರೆ.