ಐಗೂರು, ನ. ೨೧ : ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವನಾಡು ವಾರ್ಡ್ ಸಭೆ ತಾ. ೨೫ ರಂದು ಮಧ್ಯಾಹ್ನ ಯಡವನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗೌರಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಧ್ಯಾಹ್ನ ೧೨ಕ್ಕೆ ಯಡವಾರೆ ವಾರ್ಡ್ ಸಭೆ ಪ್ರಮೋದ್ ಅವರ ಅಧ್ಯಕ್ಷತೆಯಲ್ಲಿ ಯಡವಾರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಕಾಜೂರು ವಾರ್ಡ್ ಸಭೆ ಮಧ್ಯಾಹ್ನ ೧:೩೦ಕ್ಕೆ ಹರಿಹರ ಯುವಕ ಸಂಘದ ಕಚೇರಿಯಲ್ಲಿ ಜಿ.ಕೆ ವಿನೋದ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಐಗೂರು ೨(ಹೊಸತೋಟ) ವಾರ್ಡ್ ಸಭೆ ಮಧ್ಯಾಹ್ನ ೩ ಗಂಟೆಗೆ ಹೊಸತೋಟ ಅಂಗನವಾಡಿ ಕೇಂದ್ರದಲ್ಲಿ ಜಾನಕಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ತಾ.೨೬ ರಂದು ಐಗೂರು ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ಷ ಜಿ.ಕೆ ವಿನೋದ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.